ಆರೋಗ್ಯ- ಶಿಕ್ಷಣ ಕ್ಷೇತ್ರದ ಅಭಿವೃದ್ಧಿ

8KUDLIGI2
Published on

ಕೂಡ್ಲಿಗಿ: ಕಲ್ಯಾಣ ಪಥ ಯೋಜನೆಯಡಿ ಕ್ಷೇತ್ರದ ರಸ್ತೆಗಳು ಹಾಗೂ ಇತರ ವಿವಿಧ ಮೂಲಗಳಿಂದ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ ಸೇರಿದಂತೆ ಜನರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಲು ಬದ್ಧನಾಗಿದ್ದೇನೆ. 2024-25ನೇ ಸಾಲಿನಲ್ಲಿ 34 ಕೋಟಿ ರೂ. ವೆಚ್ಚದಲ್ಲಿ 40 ಕಿ.ಮೀ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದರು.

ಇದಕ್ಕೂ ಮುನ್ನ ಕಲ್ಯಾಣ ಪಥ ಯೋಜನೆಯಡಿ 4.89 ಕೋಟಿ ರೂ. ವೆಚ್ಚದಲ್ಲಿ ತುಪ್ಪಾಕನಹಳ್ಳಿಯಿಂದ ಅಕ್ಕಾಪುರದವರೆಗೆ, 2.91 ಕೋಟಿ ವೆಚ್ಚದಲ್ಲಿ ಬೊಪ್ಪಾಲಾಪುರದಿಂದ ತಿಮ್ಮಲಾಪುರ ಗಡಿವರಗೆ, 2.94 ಕೋಟಿ ರೂ. ವೆಚ್ಚದಲ್ಲಿ ಹಿರೇಹೆಗ್ಡಾಳದಿಂದ ಜಂಗಮಸೋವೇನಹಳ್ಳಿವರೆಗೆ, 2.71 ಕೋಟಿ ವೆಚ್ಚದಲ್ಲಿ ಬೀರಲಗುಡ್ಡದಿಂದ ರಾಷ್ಟ್ರೀಯ ಹೆದ್ದಾರಿವರೆಗೆ, 4.4 ಕೋಟಿ ರೂ. ವೆಚ್ಚದಲ್ಲಿ ಬಡೇಲಡಕಿನಿಂದ ಬೀರಲಗುಡ್ಡದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಮೊರಬ ಮತ್ತು ಹಿರೇಹೆಗ್ಡಾಳ್ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆಯಡಿ ತಲಾ 65 ಲಕ್ಷ ರೂ. ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಪ್ರಮುಖರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net