ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಿ

25 KRN-1
ಕೆ.ಆರ್.ನಗರದ ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ಓಡಿಪಿ ಸಂಸ್ಥೆ, ಸಂತ ಜೋಸೆಫರ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರದಲ್ಲಿ ವೈದ್ಯರು ತಪಾಸಣೆ ಮಾಡಿದರು.
Published on

ಕೆ.ಆರ್.ನಗರ: ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್ ಹೇಳಿದರು.

ಪಟ್ಟಣದ ಆಂಜನೇಯ ಬಡಾವಣೆಯ ಗಣಪತಿ ಕಲ್ಯಾಣ ಮಂಟಪದಲ್ಲಿ ಓಡಿಪಿ ಸಂಸ್ಥೆ, ಮೈಸೂರಿನ ಸಂತ ಜೋಸೆಫರ ಆಸ್ಪತ್ರೆ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗಿದ್ದು, ಸಾರ್ವಜನಿಕರು ಆರೋಗ್ಯದ ಬಗ್ಗೆ ನಿರ್ಲಕ್ಷೃ ತೋರದೆ ಎಚ್ಚರಿಕೆ ವಹಿಸಬೇಕು. ಆರ್ಥಿಕವಾಗಿ ದುರ್ಬಲವಾದವರು ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅನಾರೋಗ್ಯ ಸಮಸ್ಯೆಗಳಿಗೆ ಶಿಬಿರದಲ್ಲಿ ನೀಡುವ ಸಲಹೆ ಮತ್ತು ಸೂಚನೆಗಳನ್ನು ಪಾಲಿಸಿ ಹೆಚ್ಚಿನ ಉತ್ತಮ ಚಿಕಿತ್ಸೆ ಬೇಕಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಿಬಿರದ ಸಂಯೋಜಕ ರತ್ನಮ್ಮ, ಡಾ.ನಿತೀನ್, ಮುಖಂಡರಾದ ನಾಗೇಂದ್ರ, ಸುನೀತಾ ರಮೇಶ್, ಪುಟ್ಟಾಚಾರಿಕುಮಾರ್, ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net