

ಆಲೂರು: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷೃ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ ಹೇಳಿದರು.
ತಾಲೂಕಿನ ಸೊಂಪುರಹಾಗೂ ನಂಜದೇವರ ಕಾವಲು ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯ ಟ್ರಸ್ಟ್ ಸುಕ್ಷೇತ್ರ ಸೊಂಪುರ, ಮಾನವ ಹಕ್ಕುಗಳ ಒಕ್ಕೂಟ ಹಾಸನ, ಮಹಾಲಕ್ಷ್ಮೀ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಸನ, ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ಇಂತಹ ಸಾಮಾಜಮುಖಿ ಕಾರ್ಯಗಳಲ್ಲಿ ಎಲ್ಲರೂ ಒಟ್ಟಾಗಿ ನಿಂತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಮಾನವ ಹಕ್ಕುಗಳ ಒಕ್ಕೂಟ ಜಿಲ್ಲಾ ಅಧ್ಯಕ್ಷ ಡಾ.ಯಲಗುಂದ ಶಾಂತಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಆರೋಗ್ಯ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಶ್ರೀ ನಂಜುಂಡೇಶ್ವರಸ್ವಾಮಿ ಟ್ರಸ್ಟ್ ಅಧ್ಯಕ್ಷ ಎಸ್.ಪಿ.ಹಿರಣ್ಣಯ್ಯ, ಮಾನವ ಹಕ್ಕುಗಳ ಒಕ್ಕೂಟ ಉಪಾಧ್ಯಕ್ಷ ಯು. ಎಸ್. ಬಸವರಾಜ್, ಮಾನವ ಹಕ್ಕುಗಳ ಒಕ್ಕೂಟದ ಸದಸ್ಯ ವಿಜಯಕುಮಾರ್, ಡಾ.ಉಮೇಶ್, ಡಾ.ರಂಜಿತಾ, ಪುಷ್ಪಗಿರಿ ಮಹಾ ಸಂಸ್ಥಾನದ ಮಠದ ಸಂಚಾಲಕ ಧರ್ಮಪ್ಪ, ಕೆ.ಎಸ್.ಮಂಜೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.