ಆರೋಗ್ಯ, ಶೈಕ್ಷಣಿಕ ಪ್ರಗತಿಗೆ ನೆರವು

29-kolar-1 competitions
ಕೋಲಾರದ ಕೊಂಡರಾಜನಹಳ್ಳಿಯಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರೋಟರಿ ಸೆಂಟ್ರಲ್ ಅಧ್ಯಕ್ಷ ಕೆ.ಎನ್.ಪ್ರಕಾಶ್, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ರಾಜನಾಯಕ್, ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ಇತರರು ಇದ್ದರು.
Published on

ಕೋಲಾರ : ರೋಟರಿ ಸಂಸ್ಥೆಯು ವಿಶ್ವದಾದ್ಯಂತ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಸೇವೆಗಳನ್ನು ಯಾವ ಪ್ರತಿಫಲಾಪೇಕ್ಷೆಯಿಲ್ಲದೆ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಕೆ.ಎನ್.ಪ್ರಕಾಶ್ ತಿಳಿಸಿದರು.
ನಗರದ ಹೊರವಲಯದ ಕೊಂಡರಾಜನಹಳ್ಳಿ ಡಿಜಿಟಲ್ ಗ್ರಂಥಾಲಯದಲ್ಲಿ ಶನಿವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಯೋಗದಲ್ಲಿ ಆನ್‌ಲೈನ್ ಮೂಲಕ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ರೋಟರಿ ಸೆಂಟ್ರಲ್‌ನಿಂದ ಮಗುವೊಂದರ ಶ್ರವಣದೋಷ ಸರಿಪಡಿಸಲು ೧೫ಲಕ್ಷ ನೆರವು ನೀಡಲಾಗಿದೆ. ಮಕ್ಕಳ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಸಂಪರ್ಕಿಸಿದರೆ ನೆರವು ಒದಗಿಸಲಾಗುವುದು. ಆರೋಗ್ಯ ಸುಧಾರಣೆಗೆ ಯೋಜನೆ ರೂಪಿಸಲಾಗಿದೆ ತಿಳಿಸಿದರು.
ರೋಟರಿಯಿಂದ ರಕ್ತದಾನ, ನೇತ್ರದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾಮಧೇನು ಯೋಜನೆಯಲ್ಲಿ ವಿಧವೆಯರಿಗೆ ಜೀವನೋಪಾಯಕ್ಕೆ ನೆರವಾಗಲು ಹಸು ನೀಡಲಾಗುತ್ತಿದೆ. ೧೫ ಪ್ರಗತಿಪರ ರೈತರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ದು ತಂತ್ರಜ್ಞಾನ ಮತ್ತು ಆಧುನಿಕ ಬೇಸಾಯ ಪದ್ಧತಿಗಳ ಜಾಗೃತಿ ಮೂಡಿಸಲಾಗುವುದು ಎಂದರು.
ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡಲಾಗುವುದು. ವಿದ್ಯಾರ್ಥಿಗಳು ಗುರಿಹೊಂದಿ ಉನ್ನತ ಹುದ್ದೆಗಳಿಗೆ ಹೋಗುವ ಮೂಲಕ ನಿಮ್ಮ ಪಾಲಕರು, ಕುಟುಂಬಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ರಾಜನಾಯಕ್ ಮಾತನಾಡಿ, ಜೀವನದಲ್ಲಿ ಶಿಸ್ತು ಪಾಲಿಸಿದರೆ ಬದುಕು ಕಟ್ಟಿಕೊಳ್ಳುವ ಆತ್ಮಸ್ಥೆöÊರ್ಯ ಬರುತ್ತದೆ ಎಂದರು.
ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ಮಾತನಾಡಿ, ಪುಸ್ತಕದ ಹಸಿವು ಇರುವವರಿಗೆ ಹೊಟ್ಟೆಯ ಹಸಿವು ಕಾಣದು. ಛಲದಿಂದ ಬದುಕುವ ಗುಣವು ಬೆಳೆಯುತ್ತದೆ. ಪುಸ್ತಕದ ಮೇಲೆ ಪ್ರೀತಿ ಇದ್ದ ಡಾ.ಅಂಬೇಡ್ಕರ್ ವಿಶ್ವವೇ ಮೆಚ್ಚುವ ಸಂವಿಧಾನ ರಚಿಸಿದರು ಎಂದರು.
ಗ್ರಾಪಂ ಅಧ್ಯಕ್ಷೆ ನಾಗರತ್ನಾ, ಗ್ರಾಪಂ ಸದಸ್ಯರಾದ ಕೆ.ವಿ.ಶ್ರೀನಿವಾಸ್ ಯಾದವ್, ಲಿಂಗಪ್ಪ, ಪಿಡಿಒ ರಾಮಕೃಷ್ಣ, ಶಿಕ್ಷಣ ಸಂಯೋಜಕ ಕೆ.ಶ್ರೀನಿವಾಸ್, ಜಿಲ್ಲಾ ಜ್ಞಾನ ವಿಜ್ಞಾನ ಸಮಿತಿಯ ಪದಾಧಿಕಾರಿಗಳಾದ ಶರಣಪ್ಪ ಜಮಾದಾರ್, ಜಗನ್ನಾಥ್, ಕೆ.ಸಿ.ಪದ್ಮಾವತಿ, ಮುಕುಂದ, ಗ್ರಂಥಾಲಯ ಮೇಲ್ವಿಚಾರಕಿ ಮಂಜುಳಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net