ಆರೋಗ್ಯ ಸಂಪತ್ತು ಅತಿ ಮುಖ್ಯ

14 ckm 4
ಚಿಕ್ಕಮಗಳೂರಿನ ಜೀವನಸಂಧ್ಯಾ ವೃದ್ಧಾಶ್ರಮದಲ್ಲಿ ಸ್ಪರ್ಶ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ನಟರಾಜ್, ಡಾ.ಚಂದ್ರಶೇಖರ ಸರ್ಜಾ, ಎ.ಎನ್.ಮೂರ್ತಿ, ಶಿವರಾಜ್, ವಿ.ಕೆ.ರಘು ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಮನುಷ್ಯನಿಗೆ ಆರ್ಥಿಕ ಸಂಪತ್ತಿಗಿAತ ಆರೋಗ್ಯ ಸಂಪತ್ತು ಅತಿ ಮುಖ್ಯ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬAದಲ್ಲಿ ಮನೆಮದ್ದಿನಿಂದಲೇ ಸರಿಪಡಿಸಿಕೊಂಡು ಶಾರೀರಿಕವಾಗಿ ಸದೃಢರಾಗಬೇಕು. ಒಂದು ವೇಳೆ ಇದು ಸಾಧ್ಯವಾಗದಿದ್ದಲ್ಲಿ ವಿಳಂಬ ಮಾಡದೆ ಆಸ್ಪತ್ರೆಗೆ ತೆರಳಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಕೀಲ ನಟರಾಜ್ ಸಲಹೆ ನೀಡಿದರು.

ನಗರದ ಜೀವನಸಂಧ್ಯಾ ವೃದ್ಧಾಶ್ರಮದಲ್ಲಿ ಸ್ಪರ್ಶ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಮುಪ್ಪಿನ ವಯಸ್ಸಿನಲ್ಲಿ ಹಿರಿಯರು ಹೆಚ್ಚು ಆರೋಗ್ಯದ ಕಡೆ ಗಮನಹರಿಸಬೇಕು. ಜೀರ್ಣಕ್ರಿಯೆಗೆ ಅನುಕೂಲವಾಗುವ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಜೊತೆಗೆ ಹಣ್ಣು-ಹಂಪಲು, ತರಕಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ಇನ್ನಷ್ಟು ದಿನಗಳು ಆರೋಗ್ಯದಿಂದ ಜೀವಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸ್ಪರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಚಂದ್ರಶೇಖರ್ ಸರ್ಜಾ, ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಎ.ಎನ್.ಮೂರ್ತಿ, ವಕೀಲ ವಿ.ಕೆ.ರಘು, ಪತ್ರಕರ್ತ ಶಿವರಾಜ್, ವೃದ್ಧಾಶ್ರಮದ ಮುಖ್ಯ ವ್ಯವಸ್ಥಾಪಕ ಹರಿಸಿಂಗ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net