ಆರೋಗ್ಯಕ್ಕಾಗಿ ಶ್ರಮದಾಯಕ ಕೆಲಸ ಮಾಡಿ

24bdvt1
ಭದ್ರಾವತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾವಸಾರ ಸಮಾಜದ ಅಧ್ಯಕ್ಷ ಡಿ.ಕೆ.ರಾಘವೇಂದ್ರ ರಾವ್ ಉದ್ಘಾಟಿಸಿದರು. ಟಿ.ಎಸ್.ದುಗ್ಗೇಶ್. ಡಾ. ಶಾಂತಲಾ, ಶಿಲ್ಪಾ ರಾಣಿ, ಕಲ್ಪನಾ ಇತರರಿದ್ದರು.
Published on

ಭದ್ರಾವತಿ: ಇಂದು ಪುರುಷರಿಗಿಂತ ಮಹಿಳೆಯಲ್ಲಿ ಅನಾರೋಗ್ಯ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಪೌಷ್ಟಿಕ ಆಹಾರ ಸೇವಿಸುವ ಜತೆಗೆ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಶಿವಮೊಗ್ಗ ನಂಜಪ್ಪ ಆಸ್ಪತ್ರೆ ವೈದ್ಯೆ ಆರ್.ಶಾಂತಲಾ ಹೇಳಿದರು.

ನಗರದ ಭಾವಸಾರ ಕ್ಷತ್ರಿಯ ಸಮಾಜ, ಭಾವಸಾರ ಮಹಿಳಾ ಮಂಡಳಿ ಹಾಗೂ ಭಾವಸಾರ ವಿಷನ್‌ಗಳ ಆಶ್ರಯದಲ್ಲಿ ಶಿವಮೊಗ್ಗ ನಂಜಪ್ಪ ಲೈಫ್ ಕೇರ್ ಸಹಯೋಗದೊಂದಿಗೆ ತರೀಕೆರೆ ರಸ್ತೆಯ ಶ್ರೀ ಪಾಂಡುರಂಗ ಮಂದಿರಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ನಿತ್ಯ ಜೀವನ ಕ್ರಮವನ್ನು ಸರಿಯಾದ ನಿಟ್ಟಿನಲ್ಲಿ ಅನುಸರಿಸಬೇಕು. ಸೇವಿಸುವ ಆಹಾರ ಬಹು ಮುಖ್ಯ. ಇಂದು ಜಂಕ್‌ಫುಡ್‌ಗಳ ಸೇವನೆ ಹೆಚ್ಚಾಗುತ್ತಿದೆ. ಶ್ರಮದಾಯಕ ಕೆಲಸಗಳನ್ನು ಮಾಡದೆ ಕುಳಿತಲ್ಲೇ ಗಂಟೆಗಟ್ಟಲೆ ಕೆಲಸ ಮಾಡುತ್ತಿರುವ ಕಾರಣ ಹಲವಾರು ರೀತಿಯ ಕಾಯಿಲೆಗಳು ಕಂಡುಬರುತ್ತಿವೆ ಎಂದರು.

ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶ ಹಾಗು ಗರ್ಭಕಂಠ ಕ್ಯಾನ್ಸರ್ ಸಾಮಾನ್ಯ ಎಂಬಂತಾಗಿದೆ. ಇದರ ಲಕ್ಷಣಗಳು ಗೊತ್ತಾದ ಕೂಡಲೇ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಇಲ್ಲದಿದ್ದರೆ ಕಾಯಿಲೆ ಉಲ್ಬಣವಾಗಿ ಗುಣಪಡಿಸಲಾಗದ ಸ್ಥಿತಿ ತಲುಪುತ್ತದೆ ಎಂದು ಎಚ್ಚರಿಸಿದರು.

ಭಾವಸಾರ ಸೊಸೈಟಿ ಅಧ್ಯಕ್ಷ ಟಿ.ಎಸ್.ದುಗ್ಗೇಶ್ ಶಿಬಿರವನ್ನು ಉದ್ಘಾಟಿಸಿದರು. ಸಮಾಜದ ಅಧ್ಯಕ್ಷ ಡಿ.ಕೆ.ರಾಘವೇಂದ್ರ ರಾವ್, ಡಾ. ಕಾವ್ಯಾ, ಶಿಲ್ಪಾ ರಾಣಿ, ಕಲ್ಪನಾ, ರಘುಪತಿ, ಎಂ.ಪಿ.ವಿಶ್ವನಾಥ್ ರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net