

ಕೊಳ್ಳೇಗಾಲ: ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಮಾನಸ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಮಾನಸ ಶಿಕ್ಷಣ ಸಂಸ್ಥೆ, ನಿಸರ್ಗ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್, ಲಯನ್ಸ್ ಸಂಸ್ಥೆ, ಲಯನ್ಸ್ ಬ್ಲಡ್ ಸೆಂಟರ್, ಜೀವಧಾರ ಮೈಸೂರು ಹಾಗೂ ಜಿಲ್ಲಾಸ್ಪತ್ರೆ ಚಾಮರಾಜನಗರ, ಉಪವಿಭಾಗ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ವೇಳೆ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಮಾದೇಶ್ ಮಾತನಾಡಿ, ರಕ್ತದಾನ ಒಂದು ಶ್ರೇಷ್ಠ ದಾನ. ಜೀವ ಉಳಿಸುವ ಮಹಾ ಕಾರ್ಯವಾಗಿದೆ. ಆರೋಗ್ಯವಂತ ಸಮಾಜಕ್ಕೆ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ತಿಳಿಸಿದರು. ಶಿಬಿರದಲ್ಲಿ 90 ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಶಿಬಿರದಲ್ಲಿ ಸಿಮ್ಸ್ ವೈದ್ಯಾಧಿಕಾರಿ ಡಾ.ದಿವ್ಯಾ, ಮಾನಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ನಾಗರಾಜು, ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್, ಸಂಯೋಜನ ಅಧಿಕಾರಿ ರಾಮಕೃಷ್ಣ, ವಿಶೇಷ ಅಧಿಕಾರಿ ಅರ್. ನಾಗಭೂಷಣ್, ಪ್ರಾಂಶುಪಾಲ ಕೃಷ್ಣೇಗೌಡ, ಚನ್ನ ಶೆಟ್ಟಿ ಲಯನ್ಸ್ ಕ್ಲಬ್ ಪದಾಧಿಕಾರಿಗಳಿದ್ದರು.