ಹನೂರು: ತಾಲೂಕಿನ ಉದ್ದನೂರು ಗ್ರಾಮದ ಜಮೀನೊಂದರಲ್ಲಿ ಅನುಮಾನಾಸ್ಪದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದ ಸ್ಥಳಕ್ಕೆ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ಮಾದೇಶ್ ಅವರು ಮೇ 4 ರಂದು ಜಮೀನೊಂದರಲ್ಲಿ ಹಸು ಮೇಯಲು ಬಿಟ್ಟಿದ್ದರು. ಆದರೆ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಹಸುವನ್ನು ಹುಡುಕಿಕೊಂಡು ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಸಹೋದರ ಸುರೇಶ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಎಸ್ಪಿ ಡಾ.ಬಿ.ಟಿ ಕವಿತಾ ಅವರು ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತನ ಸಹೋದರ ಸುರೇಶ್, ಡಿವೈಎಸ್ಪಿ ಧರ್ಮೇಂದ್ರ ಹಾಗೂ ಇನ್ಸ್‌ಪೆಕ್ಟರ್ ಸಿ.ಆನಂದಮೂರ್ತಿ ಅವರಿಂದ ಘಟನೆ ಸಂಬಂಧ ಸಮಗ್ರ ಮಾಹಿತಿ ಪಡೆದರು. ಈ ವೇಳೆ ಎಸ್ಪಿ ಪ್ರತಿಕ್ರಿಯಿಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.