ಆರ್.ಎಸ್. ಪವಾರ ರಟ್ಟಿಹಳ್ಳಿ ಪಪಂ ಮುಖ್ಯಾಧಿಕಾರಿ

21 rtl 02
Published on

ರಟ್ಟಿಹಳ್ಳಿ: ನೂತನ ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ನೇಮಕವಾಗಿರುವ ಆರ್.ಎಸ್. ಪವಾರ್ ಅವರಿಗೆ ರಟ್ಟಿಹಳ್ಳಿ ಗ್ರಾ.ಪಂ. ಪಿಡಿಒ ಮತ್ತು ಅಧ್ಯಕ್ಷರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು.

ಪಪಂ ಮುಖ್ಯಾಧಿಕಾರಿ ಆರ್.ಎಸ್. ಪವಾರ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಕರೊನಾ ವೈರಸ್ ತಡೆಯುವ ಮುಂಜಾಗ್ರತೆ ದೃಷ್ಟಿಯಿಂದ ಪಿಡಿಒ ಪ್ರಕಾಶ ಸುಂಕಾಪುರ ಅವರೊಂದಿಗೆ ಮುಂಜಾಗ್ರತೆಯ ಕ್ರಮಗಳ ಕುರಿತು ಮಾಹಿತಿ ಪಡೆದರು. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಆಡಳಿತ ನಿಯಮಗಳು ವ್ಯತ್ಯಾಸಗಳಿರುತ್ತವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ಮಾಹಿತಿ ನೀಡಲಾಗುವುದು. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್​ಗಳನ್ನು ವಿಂಗಡಣೆ ಮಾಡಲಾಗುತ್ತದೆ ಎಂದರು.

ಸರ್ಕಾರದ ಆದೇಶ: ರಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ತೋಟಗಂಟಿ, ಕವಳಿಕುಪ್ಪಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯಿತಿ ಪ್ರದೇಶವನ್ನು ರಟ್ಟಿಹಳ್ಳಿ ಪರಿವರ್ತನಾ ಪ್ರದೇಶವೆಂದು ಘೊಷಿಸಿ, ಸದರಿ ಪ್ರದೇಶವನ್ನು ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಅದರಂತೆ ಈ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಹಸ್ತಾಂತರ ಮಾಡುವಂತೆ ನಿರ್ದೇಶಿಸಲಾಗಿದೆ. ಪಪಂ ದೈನಂದಿನ ಕೆಲಸ ಕಾರ್ಯಗಳಿಗೆ ಮತ್ತು ಸಾರ್ವಜನಿಕ ಆಡಳಿತಾತ್ಮಕ ದೃಷ್ಟಿಯಿಂದ ಹಿರೇಕೆರೂರು ಪಪಂ ಮುಖ್ಯಾಧಿಕಾರಿ ಆರ್.ಎಸ್.ಪವಾರ ಅವರನ್ನು ತಾತ್ಕಲಿಕವಾಗಿ ರಟ್ಟಿಹಳ್ಳಿ ಪಪಂ ಮುಖ್ಯಾಧಿಕಾರಿ ಎಂದು ಹೆಚ್ಚುವರಿ ಪ್ರಭಾರ ವಹಿಸಿಕೊಳ್ಳುವಂತೆ ಆದೇಶಿಸಲಾಗಿದೆ.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net