ಆರ್. ಧ್ರುವನಾರಾಯಣ ಅವರಿಗೆ ಶ್ರದ್ಧಾಂಜಲಿ

11 HANUR 3
Published on

ಹನೂರು: ಅಕಾಲಿಕವಾಗಿ ನಿಧನ ಹೊಂದಿದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರಿಗೆ ಪಟ್ಟಣದಲ್ಲಿ ದಲಿತ ಸಮುದಾಯದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪಟ್ಟಣ ಪಂಚಾಯಿತಿ ಸದಸ್ಯ ಸಂಪತ್‌ಕುಮಾರ್ ಮಾತನಾಡಿ, ಹನೂರು ಭಾಗದಲ್ಲಿ ಉತ್ತಮ ಒಡನಾಟವನ್ನು ಹೊಂದಿದ್ದ ಧ್ರುವನಾರಾಯಣ ಅವರು ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅದೇ ರೀತಿಯಲ್ಲಿ ಅಧಿಕಾರವಧಿಯಲ್ಲಿ ಶಾಸಕರ ಜತೆಗೂಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಿದ್ದರು. ಅಲ್ಲದೆ ಚುನಾವಣೆಯಲ್ಲಿ ಸೋತ ಬಳಿಕವೂ ಹನೂರು ಕ್ಷೇತ್ರಕ್ಕೆ ಹೆಚ್ಚು ಬಾರಿ ಆಗಮಿಸಿ ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದರು. ಸಮುದಾಯದ ಜನತೆಗೆ ಸ್ಫೂರ್ತಿದಾಯಕವಾಗಿದ್ದರು. ಆದರೆ ಇವರ ಸಾವು ನಿಜಕ್ಕೂ ಊಹಿಸಲಾರದಾಗಿದ್ದು, ತುಂಬ ನೋವನ್ನುಂಟುಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಪಂ ಮಾಜಿ ಸದಸ್ಯ ಸಿದ್ದರಾಜು, ಚಿಕ್ಕಣ್ಣ, ಲಿಂಗರಾಜು, ಮಹೇಶ್, ಕೃಷ್ಣ, ಸಾಗರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net