

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಿಯುಸಿ ಪ್ರಥಮ ಮತ್ತು ದ್ವಿತೀಯ ವರ್ಷಗಳ 2023-24ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆಗೈದು, 25 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ ಶ್ರೇಯಸ್ ಕಾಕಡೆ, ಪಾರ್ಥ ಗಾವಡೆ, ಆದಿತ್ಯಾ ಭಟ್, ಮತ್ತು ಕೃಷ್ಣಾ ಮೇಖಲಿ ಮತ್ತು ಬಾಲಕಿಯರ ವಿಭಾಗದಲ್ಲಿ ಸ್ವರಾ ಪವಾರ, ಮಾನ್ಯ ಚೌಗಲೆ, ಅಪೂರ್ವ ಪ್ರಭು, ಕೃತಿಕಾ ಹಿರೇಮಠ ವಿನ್ನರ್ಸ್ ಸ್ಥಾನಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ. ಸ್ವರಾ ಜಿ. ಪವಾರ ಅತ್ಯುತ್ತಮ ಆಟಗಾರ್ತಿ ಎಂಬ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾಳೆ.
ಈಜು ಸ್ಪರ್ಧೆಗಳಲ್ಲಿ ಪ್ರಜಕ್ತಾ ಅನಗೋಳಕರ ಅವರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು, ಪದಕ ಸ್ವೀಕರಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕರಾಟೆ ಸ್ಪರ್ಧೆಗಳಲ್ಲಿ ಕುಮಾರಿ ರಿತು ಪಾಟೀಲ ಬ್ರೌನ್ ಬೆಲ್ಟದಲ್ಲಿ ಮತ್ತು ಪ್ರಗತಿ ಸುಂಟಕರ ಬ್ಲೂ ಬೆಲ್ಟದಲ್ಲಿ, ನಿವೇದಿತಾ ಇಂಗಳಗಿ ಗ್ರೀನ್ ಬೆಲ್ಟ ಕರಾಟೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಸ್ವೀಕರಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುಟ್‌ಬಾಲ್ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಅಪರ್ಣಾ ಹರೇರ, ರಿತು ಪಾಟೀಲ, ಅಲಿಶಾ ಬೊರ್ಗೆಸ್, ಮಂಜುಷಾ ಪಾಟೀಲ್, ಸಮೃದ್ಧಿ ವಹಳ ಜಿಲ್ಲಾ ಮಟ್ಟದಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಮಾರ ಮಂಥನ ಪಗಾರೆ ಮತ್ತು ರಝೀನ ಅಹ್ಮದ ಟಿ. ಜಮಾದಾರ ಜಿಲ್ಲಾ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಬಾಸ್ಕೇಟ್‌ಬಾಲ್ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದಲ್ಲಿ ಸಾತ್ವಿಕ ಶೆಟ್ಟರ, ದಕ್ಷ ಚೌಗಲೆ, ತಹಾ ಖಾನ್, ಆದಿತ್ಯಾ ಪಾಟೀಲ, ಬಾಲಕಿಯರ ವಿಭಾಗದಲ್ಲಿ ಶ್ರೇಯಾ ಸೊಬರದ, ಓಜಲ್ ಭಾವನೆ, ಸಾಯಲಿ ಪಾಟೀಲ, ಇವರುಗಳು ವಿಜೇತರಾಗಿ ರನ್ನರ್ಸ್ ಸ್ಥಾನ ಪಡೆದು ರಾಜ್ಯ ಮಟ್ಟದ ಬಾಸ್ಕೇಟ್ ಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಸರ್ವಸದಸ್ಯರು, ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು ಹಾಗೂ ಸಂಸ್ಥೆಯ ಆಜೀವ ಸದಸ್ಯ ನಂಜಪ್ಪನವರ ಅವರು, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪಪ್ರಾಚಾರ್ಯರು ಹಾಗೂ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಕೆಎಲ್‌ಇ ಸಂಸ್ಥೆಯ ಆರ್‌ಎಲ್‌ಎಸ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿ, ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳೊಂಡಿಗೆ ದೈಹಿಕ ಶಿಕ್ಷಣಕ ನಿರ್ದೇಶಕ ಡಾ. ಶಿವಾನಂದ ಬುಲಬುಲಿ, ಪದವಿ ಪ್ರಾಚಾರ್ಯ ಡಾ.ಜೆ.ಎಸ್. ಕವಳೇಕರ, ಪ್ರಾಚಾರ್ಯ ವ್ಹಿ.ಸಿ. ಕಾಮಗೊಳ ಹಾಗೂ ಎನ್.ಎಮ್. ಪಾಟೀಲ ಇದ್ದಾರೆ.