ಆರ್‌ಎಸ್‌ಎಸ್ ಸಂವಿಧಾನ ಒಪ್ಪಿಕೊಂಡಿಲ್ಲ

IMG_20241224_134547
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 50;
Published on

ಚಾಮರಾಜನಗರ: ಈ ದೇಶದಲ್ಲಿ ಅತ್ಯಂತ ಪ್ರಬಲ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೊಳಿಸಲು ಕಾರಣವಾದ ಡಾ.ಬಿ.ಆರ್.ಅಂಬೇಡ್ಕರ್ ರಚನೆಯ ಸಂವಿಧಾನವನ್ನು ಇಂದಿಗೂ ಆರ್‌ಎಸ್‌ಎಸ್ ನವರು ಒಪ್ಪಿಕೊಂಡಿಲ್ಲ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಆದಿ ಕರ್ನಾಟಕ ಅಭಿವೃದ್ಧಿ ಸಂಘ ಹಾಗೂ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರೇ ಕಾರಣರಾಗಿದ್ದಾರೆ. ಪ್ರತಿಯೊಬ್ಬ ನಾಗರೀಕರಿಗೂ ಸಮಾನತೆಯನ್ನು ನೀಡಿದ ಸಂವಿಧಾನವನ್ನು ಆರ್‌ಎಸ್‌ಎಸ್ ನವರು ಇಂದಿಗೂ ಒಪ್ಪಿಕೊಂಡಿಲ್ಲ. ಈ ಕಾರಣಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವರ ಹೇಳಿಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷದ ಮನಸ್ಥಿತಿಯಾಗಿದೆ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net