

ಚಿತ್ರದುರ್ಗ:ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾ ಜ್ಯದ ಹನ್ನೊಂದುವರೆಯಿಂದ 13 ವರ್ಷದೊಳಗಿರುವ ಬಾಲಕ,ಬಾಲಕಿಯರಿಂದ ಮಾಚ್31ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತಾ ಪ್ರವೇಶ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಜೂನ್ 1ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯ ದೂರವಾಣಿ ಸಂಖ್ಯೆ 080-25589459 ಅಥವಾ www.rimc.gov.in ಅನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----