ಆರ್‌ಟಿಒ ಅಧಿಕಾರಿಗಳಿಂದ ವಾಹನಗಳ ತಪಾಸಣೆ ಚುರುಕು

CTD 17 DC RASTE---0002
Published on

ಚಿತ್ರದುರ್ಗ: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ,ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜ.16ರಿಂದ 23ರವರೆಗೆ ಜಿ ಲ್ಲೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು. ಸಪ್ತಾಹದ ಅ ಂಗವಾಗಿ ಡಿಸಿ ಕಚೇರಿಯಲ್ಲಿ ಬುಧವಾರ ಜಾಗೃತಿ ಭಿತ್ತಿಪತ್ರ ಬಿಡುಗಡೆ ಮಾಡಿದ ಅವರು,ಅಪಘಾತಗಳನ್ನು ನಿಯಂತ್ರಿಸಿ,ಜೀವ ರಕ್ಷಣೆ ನಿ ಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಪ್ತಾಹ ಆಚರಿಸಲಾಗುತ್ತಿದೆ.
ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಅಪಘಾ ತಗಳನ್ನು ತಡೆಗಟ್ಟಬಹುದಾಗಿದ್ದು,ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳುವ ವಿವಿಧ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಇರಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್‌ಕಾಳೆ ಸಿಂಘೆ ಅವರು ಮಾತನಾಡಿ, ಚಾಲನಾ ತರಬೇತಿ ಶಾಲೆ ಸಿಬ್ಬಂದಿಗೆ ತರಬೇತಿ,ಬೀದಿ ನಾಟಕ ಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಎಲ್ಲ ವರ್ಗದ ವಾಹನಗಳ ತಪಾಸಣೆ ತೀವ್ರಗೊಳಿಸಲಾಗುವುದು, ಹೆಲ್ಮೆಟ್ ದ್ವಿಚ ಕ್ರ ಹಾಗೂ ಸೀಟ್‌ಬೆಲ್ಟ್ ಧರಿಸಿ ಕಾರು ಮತ್ತಿತರ ವಾಹನಗಳ ಚಾಲನೆ, ರಸ್ತೆ ಪಥ ಶಿಸ್ತು ನಿರ್ವಹಣೆ ಕುರಿತು ಅರಿವು ಮೂಡಿಸಲಾಗುವುದು, ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ,ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷ ತಾ ವಿಷಯದ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು ಎಂದರು. ವಾಹನ ಸವಾರರು ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸುವ ಮೂಲಕ ಅಪಘಾತಗಳನ್ನು ನಿಯಂತ್ರಿಸಲು ನೆರವಾಗಬೇಕೆಂದರು.
ಜಿಪಂ ಸಿಇಇ ಎಸ್.ಜೆ.ಸೋಮಶೇಖರ್,ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾ ವ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಿರಿಯ ಮೋಟಾರು ವಾಹನ ನಿ ರೀಕ್ಷಕ ಪಿ.ಎಂ.ಶಾನಭಾಗ್,ಅಧೀಕ್ಷಕ ಹೇಮಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net