ಆರ್ಥಿಕ ನೆರವು ನೀಡುವಂತೆ ಅರ್ಚಕರ ಮನವಿ

7mnd2
Published on

ಮುಂಡಗೋಡ: ಕರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಪೂಜೆ, ಧಾರ್ವಿುಕ ಕಾರ್ಯಗಳು ಇಲ್ಲದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸರ್ಕಾರ ಸಹಾಯಧನ ನೀಡಬೇಕು ಎಂದು ಕೋರಿ ತಾಲೂಕು ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತ ಸಂಘದವರು ತಹಸೀಲ್ದಾರ್ ಶ್ರೀಧರ ಮುಂದಲಮನಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.

ದೇವಸ್ಥಾನಗಳು, ಸಭೆ-ಸಮಾರಂಭಗಳು, ಪೂಜೆ, ಧಾರ್ವಿುಕ ಕಾರ್ಯಗಳು ಸ್ಥಗಿತವಾಗಿವೆ. ಇದನ್ನೇ ನಂಬಿ ಬದುಕುತ್ತಿರುವ ತಾಲೂಕಿನ ಅರ್ಚಕ ಮತ್ತು ಪುರೋಹಿತರ ಕುಟುಂಬಗಳು ತುಂಬಾ ತೊಂದರೆಯಲ್ಲಿವೆ. ಶೀಘ್ರದಲ್ಲಿ ನೆರವು ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಾಲೂಕು ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತ ಸಂಘದ ಅಧ್ಯಕ್ಷ ಮಲ್ಲಯ್ಯ ಹಿರೇಮಠ, ಬಸವರಾಜ ಒಶಿಮಠ, ಬಸಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಮಂಜುನಾಥ ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net