ಆರ್ಥಿಕ ಪುನಶ್ಚೇತನಕ್ಕೆ ನೀತಿ ರೂಪಿಸಿ

2409Klb04
Published on

ಕಲಬುರಗಿ: ಕರೊನಾದಿಂದ ತತ್ತರಿಸಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ಪರ್ಯಾಯ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸಬೇಕು, ಕಾರ್ಮಿಕರು ದುಡಿಯುವ ವರ್ಗಗಳನ್ನು ಸಂಕಷ್ಟದಿಂದ ಪಾರು ಮಾಡಬೇಕು. ಹೊಸ ಶಿಕ್ಷಣ ನೀತಿ ಕೈಬಿಡಬೇಕೆಂದು ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಲಾಕ್ಡೌನ್ ಹೊತ್ತಿನಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಘೋಷಣೆ ಮಾಡಿರುವಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ಮಾರಕವಾಗಿರುವ ಹೊಸ ಶಿಕ್ಷಣ ನೀತಿ ಕೇಂದ್ರ ಸರ್ಕಾರ ಕೈಬಿಡಬೇಕು, ಮೊದಲಿನ ಪದ್ದತಿ ಮುಂದುವರಿಸಬೇಕು, ಶಿಕ್ಷಣದಲ್ಲಿ ಕೋಮುವಾದಿಕರಣ ನಿಲ್ಲಿಸಬೇಕು, ಎಲ್ಲ ಕಾರ್ಮಿಕರಿಗೆ ಕನಿಷ್ಠ 21 ಸಾ.ರೂ. ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮತ್ತು ಪ್ರಧಾನಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ್, ಶಿವಾನಂದ ಕೌಲಗಾ, ಅಶೋಕ, ನಾಗರಾಜ ಗುಳಗಿ, ಶಿವಶಂಕರ, ಮಂಜೂರ ಅಹ್ಮದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಸಕರ್ಾರವು ಪರ್ಯಾಯ ಆರ್ಥಿಕ ನೀತಿಗಳನ್ನು ರೂಪಿಸಿ ಜಾರಿಗೊಳಿಸುವ ಮೂಲಕ ತೊಂದರೆಗಳನ್ನು ದೂರ ಮಾಡಬೇಕು. ಲಾಕ್ಡೌನ್ ಕಾಲದ ಪೂರ್ಣ ವೇತನವನ್ನು ಎಲ್ಲ ಕಾರ್ಮಿಕರಿಗೆ ನೀಡಬೇಕು. ಕೆಲಸ ಕಳೆದುಕೊಂಡವರಿಗೆ ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು.ವೇತನ ಕಡಿತ ರದ್ದುಗೊಳಿಸಬೇಕು.
| ಗೌರಮ್ಮ ಪಾಟೀಲ್ ಸಿಐಟಿಯು ಜಿಲ್ಲಾಧ್ಯಕ್ಷೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net