ಆರ್ಥಿಕ ಸ್ಥಿತಿ ಸುಧಾರಣೆಗೆ ಸಾಮೂಹಿಕ ವಿವಾಹ ಸಹಕಾರಿ

7 ujjani
Published on

ಉಜ್ಜಿನಿ: ದಂಪತಿಗಳು ಸಾಮರಸ್ಯದಿಂದ ಜೀವನ ನಡೆಸಿ ಬದುಕಿನ ಸಾರ್ಥಕ್ಯ ಕಂಡುಕೊಳ್ಳಬೇಕೆಂದು ಉಜ್ಜಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಜಗದ್ಗುರು ಶ್ರೀ ಮರುಳಸಿದ್ದೇಶ್ವರ ಜಾತ್ರೆ ಪ್ರಯುಕ್ತ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬುಧವಾರ ಆಶೀರ್ವಚನ ನೀಡಿದರು. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸ್ಧಿತಿ ಸುಧಾರಿಸಿಕೊಳ್ಳಲು ಸಾಮೂಹಿಕ ವಿವಾಹಗಳು ಸಹಕಾರಿಯಾಗಿವೆ ಎಂದರು. ವಿವಿಧ ಮಠಾಧೀಶರು, ಗ್ರಾಪಂ ಅಧ್ಯಕ್ಷ, ಸದಸ್ಯರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net