ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

17 ckm 3
ಚಿಕ್ಕಮಗಳೂರು ಹೊರ ವಲಯದಲ್ಲಿರುವ ಬಂಟರ ಸಂಘದ ಭವನದಲ್ಲಿ ಚಿಕ್ಕಮಗಳೂರು ಬಂಟರ ಯಾನೆ ನಾಡವರ ಸಂಘ ಹಮ್ಮಿಕೊಂಡಿದ್ದ ವಿದ್ಯಾರ್ಥಿವೇತನ ವಿತರಣೆ ಸಮಾರಂಭವನ್ನು ರಾಜ್ಯ ಬಂಟರ ಯಾನೆ ನಾಡವರ ಸಂಘದ ರಾಜ್ಯಾಧ್ಯಕ್ಷ ಸಿ.ಎ.ಅಶೋಕ್ ಕುಮಾರ್ ಉದ್ಘಾಟಿಸಿದರು. ಪುರಂದರ ಶೆಟ್ಟಿ, ಉಮೇಶ್ ಕುಮಾರ್ ಶೆಟ್ಟಿ, ಆನಂದಕುಮಾರ್ ಶೆಟ್ಟಿ ಬಲಾರಿ ವಿ.ಶೆಟ್ಟಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಬಂಟರ ಯಾನೆ ನಾಡವರ ಸಂಘ ಉಚಿತ ಶಿಕ್ಷಣ ನೀಡಲಿದೆ ಎಂದು ರಾಜ್ಯ ಬಂಟರ ಯಾನೆ ನಾಡವರ ಸಂಘದ ರಾಜ್ಯಾಧ್ಯಕ್ಷ ಸಿ.ಎ.ಅಶೋಕ್ ಕುಮಾರ್ ತಿಳಿಸಿದರು.

ನಗರದ ಹೊರ ವಲಯದಲ್ಲಿರುವ ಬಂಟರ ಸಂಘದ ಭವನದಲ್ಲಿ ಚಿಕ್ಕಮಗಳೂರು ಬಂಟರ ಯಾನೆ ನಾಡವರ ಸಂಘ ಹಮ್ಮಿಕೊಂಡಿದ್ದ ವಿದ್ಯಾರ್ಥಿವೇತನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಸಂಬAಧ ರಾಜ್ಯ ಬಂಟರ ಸಂಘ ಈಗಾಗಲೇ ೧೩೨ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೂಡ ಇಂತಹ ಬಡ ವಿದ್ಯಾರ್ಥಿಗಳು ಇದ್ದಲ್ಲಿ ಅಂತಹವರಿಗೆ ಉಚಿತ ಶಿಕ್ಷಣ ನೀಡಲು ರಾಜ್ಯಸಂಘ ಬದ್ದವಾಗಿದೆ. ಅರ್ಹ ವಿದ್ಯಾರ್ಥಿಗಳಿದ್ದಲ್ಲಿ ಎಲ್ಲಾ ತಾಲೂಕಿನ ಬಂಟರ ಸಂಘದಿAದ ಹೆಸರು ಸಂಗ್ರಹಿಸಿ ಜಿಲ್ಲಾ ಸಂಘದ ಅಧ್ಯಕ್ಷ ಪುರಂದರ ಶೆಟ್ಟಿ ಮೂಲಕ ರಾಜ್ಯ ಸಂಘಕ್ಕೆ ಕಳುಹಿಸಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಿದರು.

ಕಳೆದ ಹಲವು ವರ್ಷಗಳಿಂದ ಚಿಕ್ಕಮಗಳೂರು ಬಂಟರ ಯಾನೆ ನಾಡವರ ಸಂಘ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ. ಮತ್ತು ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಕೂಡ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದರು.

ರಾಜ್ಯ ಬಂಟರ, ನಾಡವರ ಸಂಘದ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಉಮೇಶ್‌ಕುಮಾರ್ ಶೆಟ್ಟಿ ಮಾತನಾಡಿ, ರಾಜ್ಯ ಬಂಟರ ಯಾನೆ ನಾಡವರ ಸಂಘ ಕೈಗೊಂಡಿರುವ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಇದರ ಜೊತೆಗೆ ಆರ್ಥಿಕವಾಗಿ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ಕೆ ರಾಜ್ಯ ಸಂಘ ಕರಿಮಣಿ (ಮಾಂಗಲ್ಯ) ನೀಡಲು ಸಿದ್ಧವಿದೆ. ಅರ್ಹ ಬಡ ಕುಟುಂಬಗಳು ಜಿಲ್ಲಾ ಸಂಘದ ಮೂಲಕ ತಮ್ಮ ಹೆಸರುಗಳನ್ನು ನೋಂದಾಯಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದರು.

ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಪುರಂದರ ಶೆಟ್ಟಿ ಮಾತನಾಡಿ, ತಮ್ಮ ಅಧಿಕಾರ ಅವಧಿಯಲ್ಲಿ ಸಂಘದ ಸದಸ್ಯತ್ವ ಹೆಚ್ಚಳ ಸೇರಿದಂತೆ ಜಿಲ್ಲಾ ಪಂಚಾಯಿತಿ ಕಚೇರಿ ಸಮೀಪ ಸರ್ಕಾರ ನೀಡಿರುವ ನಿವೇಶನವನ್ನು ಸಮತಟ್ಟಗೊಳಿಸಿ, ತಂತಿ ಬೇಲಿ ನಿರ್ಮಿಸಲಾಗಿದೆ. ಇದರ ಜೊತೆಗೆ ಹಾಲಿ ಬಂಟರ ಸಂಘದ ಕಟ್ಟಡದ ಪಕ್ಕದಲ್ಲಿರುವ ಜಾಗವನ್ನು ಖರೀದಿಸಲು ನಿರ್ಧರಿಸಲಾಗಿದೆ ಎಂದರು.

ಬAಟರ ಯಾನೆ ನಾಡವರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಬಲಾರಿ ವಿ. ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಆನಂದ್ ಕುಮಾರ್ ಶೆಟ್ಟಿ, ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಶೇಖರ್‌ಶೆಟ್ಟಿ, ಸಹ ಕಾರ್ಯದರ್ಶಿ ಸತೀಶ್ ಶೆಟ್ಟಿ, ಬಾಳೆಹೊನ್ನೂರು ಬಂಟರ ಸಂಘದ ಅಧ್ಯಕ್ಷ ವೆಂಕಟೇಶ್, ಕೊಪ್ಪ ತಾಲೂಕು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ, ಶೃಂಗೇರಿ ತಾಲೂಕು ಸಂಘದ ಅಧ್ಯಕ್ಷ ರಾಘವೇಂದ್ರ ಎಸ್.ಶೆಟ್ಟಿ, ಎನ್.ಆರ್. ಪುರ ತಾಲೂಕು ಸಂಘದ ಅಧ್ಯಕ್ಷ ಪ್ರಕಾಶ್‌ಶೆಟ್ಟಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net