ಆರ್‌ಎಸ್‌ಎಸ್ ನಿಷೇಧದ ಬೇಡಿಕೆ ದುರ್ದೈವತನದ್ದು

Published on

ಹುಬ್ಬಳ್ಳಿ : ರಾಷ್ಟ್ರಪ್ರೇಮದ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ನಿಷೇಧಿಸುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿರುವುದು ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಹಾಗೂ ಇತರ ಸಂಕಷ್ಟದ ಸಮಯದಲ್ಲಿ ದೇಶದ ಜನರಿಗೆ ಸಹಾಯ ಮಾಡುವ ಕೆಲಸವನ್ನು ಆರ್‌ಎಸ್‌ಎಸ್ ಮಾಡಿದೆ. ದೀನ, ದಲಿತರ ಉದ್ಧಾರಕ್ಕಾಗಿ ಹಲವಾರು ಕಾರ್ಯಗಳನ್ನು ಮಾಡಿದೆ ಎಂದರು.
ಪಿಎ್ಐ ನಿಷೇಧಿಸಿರುವುದನ್ನು ವಿರೋಧಿಸಲೂ ಆಗದೇ, ಸಮರ್ಥಿಸಿಕೊಳ್ಳಲೂ ಆಗದೇ ಕಾಂಗ್ರೆಸ್‌ನವರು ದಿಕ್ಕು ತೋಚದಂತಾಗಿದ್ದಾರೆ. ಪಿಎ್ಐ ನಿಷೇಧದ ವಿಷಯವನ್ನು ಬೇರೆಡೆ ಸೆಳೆಯುವಕ್ಕಾಗಿ ಆರ್‌ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪಿಎ್ಐ ಮೇಲಿನ ಕೇಸ್‌ಗಳನ್ನು ವಜಾಗೊಳಿಸಿದ್ದರು. ಪಿಎ್ಐ ಬಗ್ಗೆ ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಆಧಾರಗಳು ಇಲ್ಲ ಎಂದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚರ್ಚೆ ಆ ಪಕ್ಷದ ಆಂತರಿಕ ವಿಷಯ. ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net