ಆಲೂರಿನಲ್ಲಿ ಕ್ರಿಸ್‌ಮಸ್ ಸಂಭ್ರಮ

IMG-20221225-WA0166
Published on

ಆಲೂರು: ಆಲೂರು ತಾಲೂಕಿನ ವಿವಿಧೆಡೆ ಶನಿವಾರ ರಾತ್ರಿಯಿಂದಲೇ ಕ್ರಿಸ್‌ಮಸ್ ಆಚರಣೆ ಸಂಭ್ರಮದಿಂದ ನೆರವೇರಿತು.


ಎಲ್ಲ ಚರ್ಚ್‌ಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರ ಮಾಡಲಾಗಿತ್ತು. ವಿಶೇಷ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಾಳ್ಯ ಹೋಬಳಿಯ ಜೋಸೆಫ್ ನಗರ, ಕಣತೂರು, ಮಗ್ಗೆ ಗ್ರಾಮಗಳಲ್ಲಿನ ಚರ್ಚ್‌ಗಳಲ್ಲಿ ಯೇಸುವಿನ ಜನನದ ವೃತ್ತಾಂತವನ್ನು ಪರಿಚಯಿಸುವ ಗೀತ ಗಾಯನವನ್ನು ನಟನೆಯ ಮೂಲಕ ಪ್ರದರ್ಶಿಸಲಾಯಿತು.


ಹಬ್ಬದ ವಿಶೇಷ ಬಲಿಪೂಜೆಯನ್ನು ಜೋಸೆಫ್ ಗ್ರಾಮದಲ್ಲಿರುವ ಸಂತ ಜೋಸೆಫರ ದೇವಾಲಯದಲ್ಲಿ ನೆರವೇರಿಸಲಾಯಿತು. ಧರ್ಮಗುರು ಒಂದನೀಯ ಫಾದರ್ ಆಲ್ವಿನ್ ಜೋಸೆಫ್ ಡಿಸೋಜಾ ಬಲಿಪೂಜೆಯನ್ನು ಅರ್ಪಿಸಿ ಹಬ್ಬದ ಸಂದೇಶ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net