ಆಲೂರು ಕಾಲೇಜಿಗೆ ಶೇ.87.06 ಲಿತಾಂಶ

M.K.Harshitha
Published on

ಚಾಮರಾಜನಗರ: ತಾಲೂಕಿನ ಆಲೂರು ಗ್ರಾಮಮ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು 2024-25 ನೇ ಸಾಲಿನ ದ್ವಿತೀಯ ಪಿಯುಸಿ ಲಿತಾಂಶದಲ್ಲಿ ಶೇ.87.06 ಲಿತಾಂಶವನ್ನು ಪಡೆದುಕೊಳ್ಳುವ ಮೂಲಕ, ಸರ್ಕಾರಿ ಕಾಲೇಜುಗಳಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಗಳಿಸಿದೆ.

ಕಾಲೇಜಿನ ಕಲಾ ವಿಭಾಗದಲ್ಲಿ ಒಟ್ಟು 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದು, 19 ವಿದ್ಯಾರ್ಥಿಗಳು ಉತ್ತಿರ್ಣ ರಾಗಿದ್ದು, ಶೇ.82.60 ರಷ್ಟು ಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ಹಾಗೂ ಮೂರನೇ ದರ್ಜೆಯಲ್ಲಿ 1 ವಿದ್ಯಾರ್ಥಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 9 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100 ರಷ್ಟು ಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ 1 ವಿದ್ಯಾರ್ಥಿ ಹಾಗೂ ಪ್ರಥಮ ದರ್ಜೆಯಲ್ಲಿ 8 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.

ಆಲೂರು ಗ್ರಾಮದ ಸಮೀಪದಲ್ಲೇ ಇರುವ ಮಲ್ಲುಪುರ ಗ್ರಾಮದ ಬಡ ಕುಟುಂಬದ ಕುಮಾರ ಮತ್ತು ಮಂಗಳಮ್ಮ ದಂಪತಿಗಳ ಪುತ್ರಿಯಾದ ಎಂ.ಕೆ.ಹರ್ಷಿತಾ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 571 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅದಲ್ಲದೇ ಜಿಲ್ಲೆಯಲ್ಲಿ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಲಿತಾಂಶದಲ್ಲಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಆಲೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ತಿಮ್ಮರಾಜು ಹಾಗೂ ಉಪನ್ಯಾಸಕ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net