ಆಳಂದ ಬರಪೀಡಿತ ಪ್ರದೇಶ ಘೋಷಿಸಿ

subhasha guttedar
Published on

ಆಳಂದ: ತಾಲೂಕಿನಲ್ಲಿ ಬರ ಆವರಿಸಿದ್ದು, ತೇವಾಂಶ ಕೊರತೆಯಿಂದ ಬೆಳೆ ಒಣಗುತ್ತಿದೆ. ಹೀಗಾಗಿ ಸರ್ಕಾರ ಆಳಂದ ಬರಪೀಡಿತ ಪ್ರದೇಶ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ್ ಆಗ್ರಹಿಸಿದ್ದಾರೆ.

ತಾಲೂಕಿನ ಕೆಲವೆಡೆ ಅಲ್ಪ-ಸ್ವಲ್ಪ ಮಳೆಯಾಗಿದೆ. ಆದರೆ ಆಗಸ್ಟ್ನಲ್ಲಿ ಸಂಪೂರ್ಣ ಕೈಕೊಟ್ಟಿದೆ. ಪ್ರಸಕ್ತ ಮುಂಗಾರಿನಲ್ಲಿ ಶೇ.91 ಬಿತ್ತನೆಯಾಗಿದ್ದು, ತೊಗರಿ ಪ್ರಮಾಣ ಹೆಚ್ಚಿದೆ. ಎಣ್ಣೆಕಾಳು, ವಾಣಿಜ್ಯ ಬೆಳೆಗಳು ನಿಗದಿತ ಪ್ರಮಾಣದಲ್ಲಿ ಬಿತ್ತಿದ್ದಾರೆ. ಸಕಾಲಕ್ಕೆ ಮಳೆ ಬಾರದ್ದರಿಂದ ಹಾನಿಯಾಗಿದೆ. ಬರಪೀಡಿತ ಘೋಷಿಸಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್ ನೀರು ಪೂರೈಸುವ ಕೆಲಸವಾಗಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೇವು ಬ್ಯಾಂಕ್ ಆರಂಭಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net