ಆಳಂದದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ

2202Klb11
Published on

ಕಲಬುರಗಿ: ಮಹಾಶಿವರಾತ್ರಿ ನಿಮಿತ್ತ ಫೆ.೨೬ರಂದು ಆಳಂದ ಪಟ್ಟಣದ ಲಾಡ್ಲೆ ಮಶಾಖ್ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದು ಸಂಘಟನೆಗಳಿAದ ಮಹಾಪೂಜೆ ಕೈಗೊಳ್ಳುತ್ತಿದ್ದು, ಜನರು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮನವಿ ಮಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮುಖಂಡರು, ಸಾರ್ವಜನಿಕರ ಸಭೆ ನಡೆಸಿ, ನ್ಯಾಯಾಲಯದ ಆದೇಶ ಎಲ್ಲರೂ ಪಾಲಿಸಿ, ಶಾಂತಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು. ಪರಸ್ಪರ ಪ್ರೀತಿ, ಅನ್ಯೋನ್ಯತೆಯಿಂದ ಹಬ್ಬ ಹರಿದಿನ ಆಚರಿಸಬೇಕು ಎಂದರು. ಎಸ್.ಪಿ.ಅಡ್ಡೂರು ಶ್ರೀನಿವಾಸುಲು ಮಾತನಾಡಿ, ಕೆಲ ಕಿಡಿಗೇಡಿಗಳು ಸಾಮಾಜಿಕ ಸಾಮರಸ್ಯ ಹಾಳು ಮಾಡಲು ಯತ್ನಿಸುತ್ತಿದ್ದು, ಧಾರ್ಮಿಕ ಮುಖಂಡರು ಅವಕಾಶ ನೀಡಬಾರದು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುಳ್ಳು ಸುದ್ದಿಗೆ ಗಮನ ಹರಿಸಬಾರದು ಎಂದರು. ಜಿಪಂ ಸಿಇಒ ಭಂವರ್‌ಸಿAಗ್ ಮೀನಾ, ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣನವರ್, ಎಸಿ ಸಾಹಿತ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net