ಆವತಿ ಬೆಟ್ಟದಲ್ಲಿ ವಿದ್ಯಾರ್ಥಿಗಳ ಚಾರಣ, ಜಿಲ್ಲಾಡಳಿತದಿಂದ ವಿಶ್ವಪ್ರವಾಸೋದ್ಯಮ ದಿನಾಚರಣೆ, ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ

30 Dhl Pravasodyama News ph 2 A
Published on

ದೇವನಹಳ್ಳಿ: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಕಡಿಮೆಯಾಗಿದೆ, ಸರ್ಕಾರ ಎಚ್ಚೆತ್ತು ಪ್ರವಾಸೋದ್ಯಮಕ್ಕೆ ವಿಶೇಷ ಅನುದಾನ ನೀಡಿ ಉತ್ತೇಜಿಸಬೇಕಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಆವತಿ ಬೆಟ್ಟದಲ್ಲಿ ಗುರುವಾರ ವಿಶ್ವಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಹಂತಹಂತವಾಗಿ ಅಭಿವದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಅಂತಾರಾಷ್ಟ್ರೀಯಮಟ್ಟದಲ್ಲಿ ಹೆಸರು ಪಡೆದಿರುವ ದೇವನಹಳ್ಳಿ ತಾಲೂಕಿನಲ್ಲಿ ಅನೇಕ ಪ್ರವಾಸಿ ತಾಣಗಳಿವೆ, ಇವುಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸಿದರೆ ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯುವುದಲ್ಲದೇ ವಿದೇಶಿ ಪ್ರವಾಸಿಗರನ್ನು ಸೆಳೆಯುವಲ್ಲಿಯೂ ಸಲತೆ ಕಾಣಲಿದೆ, ಆದ್ದರಿಂದ ರಾಜ್ಯ ಸರ್ಕಾರ ದೇವನಹಳ್ಳಿ ಕೋಟೆ, ಟಿಪ್ಪು ಜನ್ಮಸ್ಥಳ, ನಾಡಪ್ರಭು ಕೆಂಪೇಗೌಡರ ಪೂರ್ವಜರು ವಾಸವಾಗಿದ್ದ ಆವತಿಯನ್ನು ಪ್ರವಾಸಿ ತಾಣವಾಗಿ ಮಾರ್ಪಡಿಸಬೇಕು ಎಂದರು.

ದೇವನಹಳ್ಳಿ ಹಾಗೂ ಹೊಸಕೋಟೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಟ್ಟದಲ್ಲಿ ಚಾರಣದ ಖುಷಿ ಅನುಭವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net