ಆಶಾ ಕಾರ್ಯಕರ್ತೆಯರ ಕೊಡುಗೆ ಅನನ್ಯ

0707klb04
Published on

ಕಲಬುರಗಿ: ಜಿಲ್ಲೆಯಲ್ಲಿ ಕೋವೀಡ್ ಹರಡದಂತೆ ನಿಯಂತ್ರಿಸಲು ಆಶಾ ಕಾರ್ಯಕರ್ತೆಯರ ಶ್ರಮ ಮೆಚ್ಚುವಂತದ್ದು ಎಂದು ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅಭಿಮತ ವ್ಯಕ್ತಪಡಿಸಿದರು.
ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನದ ಚೆಕ್ ನೀಡಿದ ಅವರು, ಆಶಾ ಕಾರ್ಯಕರ್ತೆಯರು ತಮ್ಮ ಸ್ವಯಂ ರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿ ಪ್ರಧಾನಿ ಮೋದಿ ಅವರು ಸಕಾಲಿಕ ದಿಟ್ಟ ನಿರ್ಧಾರದಿಂದ ಕೋವಿಡ್ ಪ್ರಮಾಣ ಕಡಿಮೆ ಇದೆ. ಅನ್ಯದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಹರಡುವಿಕೆ ಪ್ರಮಾಣ ಕಡಿಮೆ ಇದೆ. ಈ ನಿಟ್ಟಿನಲ್ಲಿ ವೈದ್ಯರು, ನರ್ಸ , ಆಶಾ ಕಾರ್ಯಕರ್ತರು, ಪೊಲೀಸ್ರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ನಮ್ಮ ಸೇವೆಗೈಯುತಿದ್ದಾರೆ. ಅವರ ನಿರಂತರ ಪರಿಶ್ರಮ ದಿಂದಾಗಿಯೇ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣದಲ್ಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 1847 ಜನ ಆಶಾ ಕಾರ್ಯರ್ತೆಯರಿಗೆ ತಲಾ 3000 ರೂ.ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅಲ್ಲದೆ ಆಟೋ ಚಾಲಕರಿಗೆ, ಸವಿತಾ ಸಮಾಜ ಸೇರಿ ವಿವಿಧ ಸಮುದಾಯದವರಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡಿದೆ ಎಂದು ಹೇಳಿದರು.
ಕೋವಿಡ್ ಸಮೀಕ್ಷೆಗೆ ತಮ್ಮ ಮನೆಗೆ ಬಂದ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು. ಅವರು ನಿಮ್ಮ ಒಳ್ಳೆಯದಕ್ಕಾಗಿಯೆ ಶ್ರಮಿಸುತಿದ್ದಾರೆ. ಹೀಗಾಗಿ ಅವರಿಗೆ ಸಹಕಾರ ನೀಡುವುದು ಅಗತ್ಯ ಎಂದು ಹೇಳಿದರು.
ಡಾ. ವೇಣುಗೋಪಾಲ, ಡಾ.ಪ್ರಭುಲಿಂಗ ಮಾನಕರ್, ಸಿ.ಎಸ್. ನಿಂಬಾಳಕರ, ಮಹಾದೇವ ಬೆಳಮಗಿ, ಸೂರಜ್ ತಿವಾರಿ, ಪ್ರಹ್ಲಾದ ಪೂಜಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net