ಆಶಾ ಕಾರ್ಯಕರ್ತೆಯರ ಪ್ರತಿಭಟನೆ

27HLY-2
Published on

ಹಳಿಯಾಳ: ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರು ಆರಂಭಿಸಿದ ಅನಿರ್ಧಿಷ್ಟಾವಧಿಯ ಹೋರಾಟ ಬೆಂಬಲಿಸಿ ಹಳಿಯಾಳದಲ್ಲೂ ಸೋಮವಾರ ಆಶಾ ಕಾರ್ಯಕರ್ತೆಯರು ಮಿನಿ ವಿಧಾನ ಸೌಧದೆದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 12 ಸಾವಿರ ಖಾತರಿಪಡಿಸಬೇಕು, ಕೋವಿಡ್-19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಾ ಸಾಮಾಗ್ರಿ ನೀಡಬೇಕು, ಕೋವಿಡ್ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಸಂಗೀತಾ ಅಂಗ್ರೋಳ್ಳಿ, ರೋಜಿ ದಬಾಲಿ, ಸಂಗೀತಾ ತಿಟ್ಟೆಕರ, ಅನ್ನಮ್ಮ ಆರ್.ಆರ್, ಸರಸ್ವತಿ ಲಮಾಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net