ಆಶಾ ಕಾರ್ಯಕರ್ತೆಯರ ಪ್ರತಿಭಟನೆ

20 Jaggu 2
Published on

ಬೆಳಗಾವಿ: ರಾಜ್ಯ ಸರ್ಕಾರ 10 ಸಾವಿರ ರೂ. ಗೌರವಧನ ನೀಡುವ ಭರವಸೆ ನೀಡಿ, ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಆರೋಪಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ತಿಂಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ 10 ಸಾವಿರ ರೂ. ಗೌರವ ಧನ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ, ಭರವಸೆಯಂತೆ 10 ಸಾವಿರ ರೂ. ಗೌರವ ಧನ ನೀಡುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಹೆಚ್ಚಿಸಬೇಕಾಗಿತ್ತು. ಕೂಡಲೇ 10 ಸಾವಿರ ರೂ. ಗೌರವಧನ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಎಐಟಿಯುಸಿ ಕಾರ್ಯದರ್ಶಿ ಗೀತಾ ರಾಯಗೋಳ, ಸಂಘದ ಪ್ರಮುಖ ಗಂಗಾಧರ ಬಡಿಗೇರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net