ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ

S.17 dhl Asha workers news- ph-2
Published on

ದೇವನಹಳ್ಳಿ : ಕರೊನಾ ಪಿಡುಗಿನಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಅಪಾರವಾದುದು. ಹಾಗಾಗಿ ಅವರೆಲ್ಲರ ಸೇವೆಯನ್ನು ಗುರುತಿಸಿ, ವೈಯಕ್ತಿಕವಾಗಿ ಪ್ರೋತ್ಸಾಹಧನ ಮತ್ತು ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದ್ದಾರೆ.

ದೇವನಹಳ್ಳಿಯ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ 143 ಆಶಾಕಾರ್ಯಕರ್ತೆಯರಿಗೆ ವಯಕ್ತಿಕವಾಗಿ ದಿನಸಿ ಕಿಟ್ ಮತ್ತು ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವವರಿಗೆ ತಲಾ ಹತ್ತು ಸಾವಿರ ಪ್ರೋತ್ಸಾಹಧನ ಮತ್ತು ಎಲ್ಲ ಕಾರ್ಯಕರ್ತೆಯರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ನಿಮ್ಮ ಸಂಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲೂಕು ಸೊಸೈಟಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಆರ್. ಮುನಿರಾಜು, ಪುರಸಭೆ ಸದಸ್ಯರಾದ ಜಿ.ಎ. ರವೀಂದ್ರ, ಪುಷ್ಪಾ ಲಕ್ಷ್ಮೀನಾರಾಯಣ್, ತಾಲೂಕು ವೈದ್ಯಾಧಿಕಾರಿ ಡಾ. ಪಿ.ಕೆ. ಸಂಜಯ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net