ಆಸನೂರಿನಲ್ಲಿ ಟ್ಯಾಂಕರ್ ಪಲ್ಟಿ

22rajesh12
Published on

ಚಾಮರಾಜನಗರ: ಜಿಲ್ಲೆಯ ಸಮೀಪದ ತಮಿಳುನಾಡಿನ ಆಸನೂರಿನ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೈಸೂರಿನಿಂದ ಶುಕ್ರವಾರ ಕೊಯಮತ್ತೂರಿಗೆ ಹೋಗುತ್ತಿದ್ದ ಡೀಸೆಲ್ ಟ್ಯಾಂಕರ್ ಆಸನೂರಿನ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಚಾಲಕ ಗೌತಮ್‌ಗೆ(29) ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯಲ್ಲಿ ಎದುರು ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟ್ಯಾಂಕರ್ ಪಲ್ಟಿ ಹೊಡೆದಿದೆ ಎಂದು ತಿಳಿದುಬಂದಿದೆ. ಟ್ಯಾಂಕರ್‌ನಲ್ಲಿದ್ದ 10, 000 ಲೀಟರ್ ಡೀಸೆಲ್ ವ್ಯರ್ಥವಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಅಗ್ನಿ ಅವಘಡ ಸಂಭವಿಸದಂತೆ ಕ್ರಮವಹಿಸಿದರು. ಕ್ರೇನ್ ಮೂಲಕ ಟ್ಯಾಂಕರ್ ಅನ್ನು ಮೇಲಕ್ಕೆತ್ತಿ ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net