ಆಸ್ಪತ್ರೆ ಅವ್ಯವಸ್ಥೆಗೆ ನಾಗಲಕ್ಷ್ಮಿ ಗರಂ

4Anand3
Published on

ಚಿಕ್ಕೋಡಿ: ಪಟ್ಣಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಆಸ್ಪತ್ರೆ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಒಳ ರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಪರೀಕ್ಷಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡದ ಹಿನ್ನಲೆ ಮುಖ್ಯ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಅಸ್ವಚ್ಛತೆ, ಶುದ್ಧ ಕುಡಿ ನೀರಿನ ಕೊರತೆ ಇದೆ. ಆಸ್ಪತ್ರೆ ಅವ್ಯವಸ್ಥೆ ಕುರಿತು ಜಿಲ್ಲಾಕಾರಿ ಹಾಗೂ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಮಹಿಳಾ ಆಯೋಗ ಅಧ್ಯಕ್ಷರ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳು ತಡವಡಿಸಿದರು. ಆಸ್ಪತ್ರೆಯ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದ ಸ್ವಚ್ಛತೆ ನಿರ್ವಹಣೆ ಕಷ್ಟ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡಿದರು.

ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ಮುಖ್ಯ ವೈದ್ಯಾಧಿಕಾರಿ ಡಾ.ಮಹೇಶ ನಾಗರಬೆಟ್ಟ, ತಾಲೂಕು ವೈದ್ಯಾಽಕಾರಿ ಸುಕುಮಾರ ಬಾಗಾಯಿ, ತಹಸೀಲ್ದಾರ್ ಸಿ.ಎಸ್ ಕುಲಕರ್ಣಿ, ಡಿವೈಎಸ್ಪಿ ಗೌಡರ, ಆರೋಗ್ಯ ಇಲಾಖೆ ಸಿಬ್ಬಂದಿ ರಾಜು ದತವಾಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net