ಆಸ್ಪತ್ರೆಗಳ ಮೂಲ ಸೌಲಭ್ಯಗಳ ಪರಿಶೀಲನೆ

29BK1
 ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಕೆಕೆಆರ್‌ಡಿಬಿ ಅಧೀನ ಕಾರ್ಯದರ್ಶಿ, ತಾಲೂಕು ಉಸ್ತುವಾರಿ ಅಧಿಕಾರಿ ಪ್ರಕಾಶ ಕುದರಿ ಭೇಟಿ ನೀಡಿ ಪರಿಶೀಲಿಸಿದರು. ಟಿಎಚ್‌ಒ ಡಾ.ಆಶೋಕ ಮೈಲಾರಿ, ಇಎಂಒ ಡಾ.ಅಪರ್ಣ ಇತರರಿದ್ದರು.
Published on

ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧೀನ ಕಾರ್ಯದರ್ಶಿಗಳು ಆಗಿರುವ ಉಸ್ತುವಾರಿ ಅಧಿಕಾರಿಗಳು ಪ್ರಕಾಶ ಕುದರಿ ಮಂಗಳವಾರ ನಗರ ಸೇರಿ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಮೂಲ ಸೌಕರ್ಯಗಳ ಕುರಿತು ಪರಿಶೀಲಿಸಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಪ್ರತಿಯೊಂದು ವಿಭಾಗಕ್ಕೂ, ಸಾಮಾನ್ಯ ವಾರ್ಡ್ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಭೇಡಿ ನೀಡಿ, ವ್ಯವಸ್ಥೆ ಮತ್ತು ಇರುವ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮಾತನಾಡಿಸಿ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ಸ್ಕಾಮತ್ತು ಬ್ಲಡ್‌ಬ್ಯಾಕ್ ಅವಶ್ಯಕತೆ ಇದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಕಾಳಜಿ ವಹಿಸಬೇಕು ಎಂದು ಕುದರಿ ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರಿ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಪರ್ಣಾ ಮಹಾನಂದ ಇದ್ದರು.

ರಾಜೇಶ್ವರ ಸಮುದಾಯ ಆರೋಗ್ಯ ಕೇಂದ್ರ, ಮುಡಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಖೂರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿಪರಿಶೀಲಿಸಿದರು. ಹೊರ ಮತ್ತು ಒಳ ರೋಗಿಗಳಿಗೆ ಮಾತನಾಡಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಕುರಿತು ಮಾಹಿತಿ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net