ಆಸ್ಪತ್ರೆಗೆ ಶಾಸಕ ಡಾ.ಬೆಲ್ದಾಳೆ ದಿಢೀರ್ ಭೇಟಿ

mannalli
Published on

ಬೀದರ್: ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆ ವಿವಿಧ ವಿಭಾಗಗಳಿಗೆ ತೆರಳಿದ ಅವರು, ವೈದ್ಯರು ಮತ್ತು ಸಿಬ್ಬಂದಿ ನಿಷ್ಕಾಳಜಿ ಕುರಿತು ಮಾಹಿತಿ ಪಡೆದುಕೊಂಡರು. ಕೆಲ ರೋಗಿಗಳು ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ದೂರಿದರೆ, ಕೆಲವರು ರಾತ್ರಿ ವೇಳೆ ವೈದ್ಯರು ಇರುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಬರುವ ದಿನಗಳಲ್ಲಿ ಹೀಗಾಗಲು ಬಿಡುವುದಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಶಾಸಕರು ಸೂಚಿಸಿದರು.
ಬಳಿಕ ವೈದ್ಯರು, ಸಿಬ್ಬಂದಿ ಸಭೆ ನಡೆಸಿದ ಬೆಲ್ದಾಳೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಇದ್ದರೆ ಮಾಹಿತಿ ನೀಡಿ. ಮೇಲಕಾರಿಗಳ ಗಮನಕ್ಕೆ ತಂದು ಒದಗಿಸಿಕೊಡುವುದಾಗಿ ಹೇಳಿದರು.
ನಂತರ ಹೊಸದಾಗಿ ನಿರ್ಮಾಣವಾಗುತ್ತಿರುವ ಆರೋಗ್ಯ ಕೇಂದ್ರಕ್ಕೆ ತೆರಳಿ ಪರಿಶೀಲಿಸಿದ ಅವರು, ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೂ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು . ನಿರ್ಮಾಣವಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆ ಬಾಲಕರ ವಸತಿನಿಲಯ ಕಾಮಗಾರಿ ಕುರಿತು ಮಾಹಿತಿ ಪಡೆದರು. ಟಿಎಚ್ಒ ಸಂಗಾರಡ್ಡಿ, ಡಾ.ಸೂರ್ಯಕಾಂತ, ಭೂಷಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net