ಆಸ್ಪತ್ರೆಯಿಂದ ಮನೆಗೆ ತೆರಳಿದ ಶಾಸಕ ಮಹೇಶ್

mahesh N
Published on

ಮೈಸೂರು: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ನಗರದ ಅಪೊಲೋ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ.


ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ತುರ್ತು ತಪಾಸಣೆಗೆ ಭಾನುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು. ಆಂಜಿಯೊಗ್ರಾಂ ಸೇರಿದಂತೆ ವಿವಿಧ ತಪಾಸಣೆ ಮಾಡಲಾಗಿತ್ತು. ‘ಆತಂಕಪಡುವ ಅಗತ್ಯ ಇಲ್ಲ, ವಿಶ್ರಾಂತಿ ಪಡೆಯಿರಿ’ ಎಂದು ವೈದ್ಯರು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಒಂದು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದಿದ್ದರು.


ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net