ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಕೈಬಿಡಿ

19 sgr 3 web
Published on

ಸಾಗರ: ಕೇಂದ್ರ ಸರ್ಕಾರ ದಿನನಿತ್ಯ ಬಳಕೆಯ ಆಹಾರ ವಸ್ತುಗಳ ಮೇಲೆ ವಿಧಿಸಿರುವ ಶೇ.5ರಷ್ಟು ಜಿಎಸ್‌ಟಿಯನ್ನು ಕೈಬಿಡುವಂತೆ ಒತ್ತಾಯಿಸಿ ಮಂಗಳವಾರ ವರ್ತಕರ ಸಂಘದಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅಕ್ಕಿ, ಗೋಧಿ, ರಾಗಿ, ಜೋಳ, ಮಂಡಕ್ಕಿ, ಅವಲಕ್ಕಿ ಇನ್ನಿತರೆ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಲಾಗಿದೆ. ಇದರಿಂದ ಜನಸಾಮಾನ್ಯರ ಮೇಲೆ ಹೊರೆ ಹೇರಿದಂತಾಗಿದೆ. ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಆಹಾರ ವಸ್ತುಗಳ ಮೇಲಿನ ಜಿಎಸ್‌ಟಿ ಹೇರಿಕೆಯನ್ನು ಕೈಬಿಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. ವರ್ತಕರ ಸಂಘದ ಅಧ್ಯಕ್ಷ ಯು.ಜೆ.ಮಲ್ಲಿಕಾರ್ಜುನ್, ಸುರೇಶ್, ಗಂಗಾಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net