ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ
Published on

ಹಾಸನ: ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸದ ಹಾಗೂ ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತಂಡ ಪರಿಶೀಲನೆ ನಡೆಸಿದರು.
ರಾಜ್ಯದ ಸುಮಾರು 40 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, ಅಂತೆಯೇ ಹಾಸನದಲ್ಲೂ ಜಗನ್ನಾಥ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ಏಕ ಕಾಲದಲ್ಲಿ ದಾಳಿ ಮಾಡಿದರು.
ಅಲ್ಲದೆ ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿಯ ಮೇಲೂ ದಾಳಿ ಮಾಡಿ ಅವಲೋಕನ ನಡೆಸಿದರು. ಹಲವು ಗಂಟೆಗಳ ಕಾಲ ಇಬ್ಬರ ಮನೆ ಹಾಗೂ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಎಸ್ಪಿ ಮಲ್ಲಿಕ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿಯಲ್ಲಿ ಭಾಗಿಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net