ಆಹ್ವಾನ

Published on

ಬಳ್ಳಾರಿ : ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಹಯೋಗದೊಂದಿಗೆ ಅ.03 ರಿಂದ 11 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ ಸ್ಕೌಟ್ ಮತ್ತು ಗೈಡ್ಸ್ ಮೈದಾನ ಮೈಸೂರಿನಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಬೇಕು.ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ. 30 ರಂದು ಸಂಜೆ 5ರೊಳಗೆ ಸಲ್ಲಿಸಬೇಕು. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು. ಮಾಹಿತಿಗೆ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಚೇರಿ ಹಾಗೂ ದೂ:080-22484516/ 22107704 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net