ಇ-ಕೆವೈಸಿ ಮಾಡಿಸಲು ಡಿಸಿ ಮನವಿ

Published on

ಚಾಮರಾಜನಗರ: ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ಮೊಬೈಲ್ ಸಂಖ್ಯೆ ಜತೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಚೀಟಿಯಲ್ಲಿರುವ ಎಲ್ಲ ಪಡಿತರ ಚೀಟಿದಾರರ ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ಜತೆ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಚೀಟಿಯಲ್ಲಿರುವ ಎಲ್ಲ ಪಡಿತರರ ಬಯೋಮೆಟ್ರಿಕ್ ನೀಡಿ ಜಾತಿ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಡಿಸಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net