ಇಂಡಿ ಶಾಸಕ ಯಶವಂತರಾಯಗೌಡ ಬೆಂಬಲ

bkt-6-4 b
ಬಾಗಲಕೋಟೆ ನಗರದಲ್ಲಿ ನಡೆಯುತ್ತಿರುವ ಕೃಷ್ಣಾ ಬಾಂಽತ ಸಂತ್ರಸ್ತರ ಹೋರಾಟ ಸ್ಥಳಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಅಜಯಕುಮಾರ ಸರಾನಾಯಕ, ಹೋರಾಟ ಸಮಿತಿ ಅಧ್ಯಕ್ಷ ಅದೃಶ್ಯಪ್ಪ ದೇಸಾಯಿ ಇದ್ದರು.
Published on

ಬಾಗಲಕೋಟೆ: ನಗರದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ನಮಗೆ ನ್ಯಾಯ ಕೇಳುವ ಹಕ್ಕು ಇದೆ. ಕಾನೂನಾತ್ಮಕವಾಗಿ ಧ್ವನಿ ಎತ್ತಿದ್ದೇವೆ. ಯಾವುದೇ ಸರ್ಕಾರವಿರಲಿ ಕೃಷ್ಣಾ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಮುನ್ನ ಎಚ್ಚೆತ್ತುಕೊಂಡು ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net