ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆಗೆ ಅತ್ಯುತ್ತಮ ಫಲಿತಾಂಶ

Halarshi
????????????????????????????????????
Published on

ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಗೆ ಶೇ. 100ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾದ 123 ವಿದ್ಯಾರ್ಥಿಗಳಲ್ಲಿ 45-ಅತ್ಯುನ್ನತ ಶ್ರೇಣಿ, 70-ಪ್ರಥಮ ಶ್ರೇಣಿ, ಇನ್ನುಳಿದ ವಿದ್ಯಾರ್ಥಿಗಳು ಸೇರಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯಲ್ಲೂ 14 ವಿದ್ಯಾರ್ಥಿಗಳ ಪೈಕಿ 7 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಾಲಾ-ಕಾಲೇಜಿಗೆ ಕೀರ್ತಿ ತಂದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶ್ರಮಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net