ಇಂದಿನಿ0ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

bkt-28-1
ಬಾಗಲಕೋಟೆ ನಗರ ಪರೀಕ್ಷಾ ಕೇಂದ್ರದಲ್ಲಿ ಡೆಸ್ಕ್ಗಳಿಗೆ ನಂಬರ್ ಹಾಕುತ್ತಿರುವುದು.
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಮಾರ್ಚ ೧ ರಿಂದ ೨೦ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಸೂಸುತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿರುವ ೧೬೨ ಕಾಲೇಜುಗಳಿಗಾಗಿ ಬಾಗಲಕೋಟೆ ೯, ಗುಳೇದಗುಡ್ಡ ೧, ಬಾದಾಮಿ ೩, ಹುನಗುಂದ ೪, ಇಳಕಲ್ಲ ೩, ಬೀಳಗಿ ೪, ಮುಧೋಳ ೫, ಜಮಖಂಡಿ ೬ ಹಾಗೂ ರಬಕವಿ ಬನಹಟ್ಟಿ ೬ ಸೇರಿದಂತೆ ಒಟ್ಟು ೪೧ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೬೪೨೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ೨೪೫೭೩ ಹೊಸ, ೬೭೮ ಬಾಹ್ಯ ಮತ್ತು ೧೧೭೬ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ೪೩ ಮುಖ್ಯ ಅಽÃಕ್ಷಕರು ೪೧ ಉಪ ಮುಖ್ಯ ಅಽÃಕ್ಷಕರು, ೮೬ ಸ್ಥಾನಿಕ ಜಾಗೃತ ದಳದ ಸದಸ್ಯರು, ೨೪ ಮಾರ್ಗಾಽಕಾರಿಗಳು ಹಾಗೂ ೧೦೯೧ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದ ಮುಖ್ಯ ಅಽÃಕ್ಷಕರು, ಸಹ ಮುಖ್ಯ ಅಽÃಕ್ಷಕರು ಹಾಗೂ ಇತರೆ ಸಿಬ್ಬಂದಿ ವರ್ಗದವರು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ಮಾಡುವದರ ಜೊತೆಗೆ ಯಾವುದೇ ದುರಾಚರಣೆ ನಡೆಯದಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿನ ಮುಖ್ಯ ಅಽÃಕ್ಷಕರನ್ನು ಹೊರತು ಪಡಿಸಿ ಇತರೆ ಅಽಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್, ಇ-ಕ್ಯಾಮರಾ, ಲ್ಯಾಪಟಾಪ್ ತರುವುದನ್ನು ಕಡ್ಡಾಯವಾಗಿ ನಿಷೇಽಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ಯಾವುದೇ ರೀತಿಯ ಅಹಿತಕರ ಘಟನೆಗಳು ಪರೀಕ್ಷೆಯಲ್ಲಿ ಸಂಭವಿಸಿದAತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಪರೀಕ್ಷಾ ವಿಷಯದ ಉಪನ್ಯಾಸಕರು ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದಲ್ಲಿ ಇರದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ಪ್ರದೇಶವನ್ನು ನಿಷೇಽತ ಪ್ರದೇಶವೆಂದು ಆದೇಶಿಸಲಾಗಿದೆ. ಅಲ್ಲದೇ ಪರೀಕ್ಷಾ ಅವಽಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಮುತ್ತಲಿನ ಝರಾಕ್ಸ ಅಂಗಡಿಗಳನ್ನು ಮುಚ್ಚತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ಜಿಲ್ಲಾಽಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net