ಬಳ್ಳಾರಿ : ಲಾರಿಗಳ ಸರಕು ಸಾಗಾಟದ ಬಾಡಿಗೆ ದರ ಹೆಚ್ಚಿಸುವ ಸಂಬಂಧ ಬುಧವಾರ ದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ ತಿರ್ಮಾನಿಸಿದೆ ಎಂದು ಅಧ್ಯಕ್ಷ ಮಿಂಚು ಶ್ರೀನಿವಾಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಸುತ್ತಮುತ್ತಲಿನ ಐದು ಸೆಕ್ಟರ್‌ಗಳಲ್ಲಿರುವ ಎಲ್ಲ ಸ್ಪಾಂಜ್ ಐರನ್ ಕಾರ್ಖಾನೆಗಳ ಎದುರು ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.