ಇಂದಿನಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

sslc board
Published on

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಜು.13ರಂದು ಆರಂಭವಾಗಲಿದ್ದು, ನಗರದ ಆರು ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕುವೆಂಪುನಗರದ ಜ್ಞಾನಗಂಗಾ, ಜಯಲಕ್ಷ್ಮೀಪುರಂನ ಚಿನ್ಮಯ, ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸದ್ವಿದ್ಯಾ, ಸರಸ್ವತಿಪುರಂನ ವಿಜಯ ವಿಠಲ, ನಿರ್ಮಲ, ಬನ್ನಿಮಂಟಪದಲ್ಲಿರುವ ಸೆಂಟ್ ಫಿಲೋಮಿನಾ ಪ್ರೌಢಶಾಲೆಯಲ್ಲಿ ಮೌಲ್ಯಮಾಪನ ನಡೆಯಲಿದೆ. ಕರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.

ಮೌಲ್ಯಮಾಪನ ಹಿನ್ನೆಲೆಯಲ್ಲಿ ಈ ಕೇಂದ್ರಗಳ ಸುತ್ತಮುತ್ತ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಜೂ.25ರಿಂದ ಜು 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಮೌಲ್ಯಮಾಪನ ಪ್ರಕ್ರಿಯೆ ಮುಗಿದ ಬಳಿಕ ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net