ಇಂದಿರಾ ಕ್ಯಾಂಟೀನ್ ಪ್ರಯೋಜನ ಪಡೆಯಿರಿ

MAY 14-HRP-02
Published on

ಹರಪನಹಳ್ಳಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಬುಧವಾರ ಮಾತನಾಡಿದರು. ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ನನ್ನ ಸಹೋದರ, ಶಾಸಕರಾಗಿದ್ದ ಎಂ.ಪಿ.ರವೀಂದ್ರ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ನಾನು ಶಾಸಕಿಯಾದ ಬಳಿಕ ಉದ್ಘಾಟನೆ ಭಾಗ್ಯ ದೊರಕಿದೆ ಎಂದರು.

ಬಡವರು ಹಸಿವಿನಿಂದ ಬಳಲಬಾರದು. ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಿ ನೆಮ್ಮದಿಯಿಂದ ಬದುಕಬೇಕೆಂಬುದು ಸಿದ್ದರಾಮಯ್ಯ ಅವರ ಮಹದಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಹರಪನಹಳ್ಳಿಯಲ್ಲಿ ಪ್ರಥಮ ಬಾರಿಗೆ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ, ಕಡಿಮೆ ದರದಲ್ಲಿ ಪ್ರತಿದಿನ ಮೂರು ಹೊತ್ತು ಶುಚಿಯಾದ ಊಟ, ಉಪಹಾರ ದೊರೆಯಲಿದೆ ಎಂದು ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

ಬಿಸಿಎಂ ಇಲಾಖೆಯ ಕೆ.ಭೀಮಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ, ಸದಸ್ಯರಾದ ಲಾಟಿ ದಾದಪೀರ್, ಜಾಕೀರ್ ಹುಸೇನ್, ಭರತೇಶ, ಪ್ರಮುಖರಾದ ಎಚ್.ವಸಂತಪ್ಪ, ಒ.ರಾಮಪ್ಪ, ಬಂಡ್ರಿ ಗೋಣಿಬಸಪ್ಪ, ಟಿಎಚ್‌ಎಂ ಮಂಜುನಾಥ, ಇಸ್ಮಾಯಿಲ್ ಎಲಿಗಾರ, ಶಶಿಕುಮಾರ ನಾಯ್ಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net