

ಸಂಡೂರು: ಪಂಚ ಗ್ಯಾರಂಟಿಗಳೊಂದಿಗೆ ಇಂದಿರಾ ಕ್ಯಾಂಟೀನ್ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ ಎಂದು ಶಾಸಕಿ ಅನ್ನಪೂರ್ಣ ತುಕಾರಾಮ್ ಹೇಳಿದರು.
ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ತೋರಣಗಲ್, ಕುಡತಿನಿ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಬೇರೆ ರಾಜ್ಯಗಳಿಂದ ಬಂದಿರುವ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ನಿಂದ ಅನುಕೂಲವಾಗಲಿದೆ. ಸ್ವಚ್ಛತೆ ಕಾಪಾಡುವುದರೊಂದಿಗೆ ಗುಣಮಟ್ಟದ ಊಟ ಬಡಿಸಬೇಕು. ಮಹಿಳೆಯರಿಗೆ ಉದ್ಯೋಗ ಕೊಡಿಸುವ ಸಲುವಾಗಿ ಅಪರಾಲ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದರು.
ಪುರಸಭೆ ಸದಸ್ಯ ಎನ್.ಸೋಮಪ್ಪ ಮಾತನಾಡಿ, 10 ರೂ. ಕೊಟ್ಟರೆ ಊಟ ಸಿಗುವ ಇಂದಿರಾ ಕ್ಯಾಂಟೀನ್‌ನಿಂದ ಕಾರ್ಮಿಕರಿಗೆ ಉಪಯೋಗವಾಗಲಿದೆ ಎಂದರು.
ಜೆಎಸ್‌ಡಬ್ಲುೃ ಸಿಎಸ್‌ಆರ್ ಮುಖ್ಯಸ್ಥ ಪೆದ್ದಣ್ಣ ಬಿಡಲಾ ಮಾತನಾಡಿ, ರೋಗಿಗಳ ಮನೆಗೆ ಆಂಬುಲೆನ್ಸ್ ತೆಗೆದುಕೊಂಡು ಹೋಗಿ ಬಿಪಿ, ಮಧುಮೇಹ, ರಕ್ತ ಪರೀಕ್ಷೆ ನಡೆಸಿ ಅಗತ್ಯ ಮಾತ್ರೆಗಳನ್ನು ನೀಡಲಾಗುವುದು. ಇದಕ್ಕಾಗಿ ಪ್ರತಿ ವರ್ಷ 50 ಲಕ್ಷ ರೂ. ಖರ್ಚು ಮಾಡುತ್ತಿದ್ದೇವೆ. ಮೂರು ಆಂಬುಲೆನ್ಸ್‌ಗಳ ಮೂಲಕ ಕಂಪನಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ವಾರ್ಷಿಕ 1.5 ಕೋಟಿ ರೂ. ಖರ್ಚು ಮಾಡಿ ಉಚಿತ ಆರೋಗ್ಯ ಸೇವೆ ನೀಡಲಾಗುವುದು ಎಂದರು.
ಕುರೇಕುಪ್ಪ ಪುರಸಭೆ ಅಧ್ಯಕ್ಷ ಕೆ.ಕಲ್ಗುಡೆಪ್ಪ, ಉಪಾಧ್ಯಕ್ಷೆ ಜ್ಯೋತಿ ನಾರಾಯಣ, ಮುಖ್ಯಾಧಿಕಾರಿ ಸತೀಶ್ ಗುಡ್ಡೆ, ಮಾಜಿ ಎಂಎಲ್ಸಿ ಕೆಎಸ್‌ಎಲ್ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಏಕಾಂಬ್ರಪ್ಪ, ಉಪಾಧ್ಯಕ್ಷ ಕೆ.ನೂರ್‌ಅಹ್ಮದ್, ಜೆಎಸ್‌ಡಬ್ಲುೃ ಹಿರಿಯ ಉಪಾಧ್ಯಕ್ಷ ಸುನಿಲ್ ರಾವೂಫ್, ಜಿಪಂ ಮಾಜಿ ಸದಸ್ಯ ವಿ.ಜನಾರ್ದನ, ಮುಖಂಡರಾದ ದರೋಜಿ ಮಾರೆಪ್ಪ, ಬಿಎಂಎಸ್.ಗುರು, ತಹಸಿಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಬಿಇಒ ಡಾ.ಐ.ಆರ್.ಅಕ್ಕಿ ಇದ್ದರು.