ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

District Congress Office Photo
Published on

ಬೀದರ್: ನಗರದ ಶಿವನಗರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಆಚರಿಸಲಾಯಿತು.
ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಪ್ರಧಾನಿಯಾಗಿ ಇಂದಿರಾ ಗಾಂಧಿ ಅವರು ಬಡತನ ನಿವಾರಣೆ ಸೇರಿದಂತೆ ದೇಶದ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಸ್ಮರಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಶಾಸಕ ರಹೀಂಖಾನ್, ಮುಖಂಡರಾದ ಪ್ರದೀಪ್ ಕುಶನೂರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಅಬ್ದುಲ್ ಮನ್ನಾನ್ ಸೇಠ್, ಶಂಕರ ರೆಡ್ಡಿ ಚಿಟ್ಟಾ, ಸಂಜುಕುಮಾರ ಡಿ.ಕೆ,  ಅಬ್ದುಲ್ ಸತ್ತಾರ್, ಲತಾ ರಾಠೋಡ್, ನಾಗಪ್ಪ, ಪರ್ವೇಜ್ ಕಮಲ್, ವಿಶಾಲ್ ದೊಡ್ಡಿ, ನಿಸಾರ್ ಅಹಮ್ಮದ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net