ಇಂದಿರಾ ನಮ್ಮೆಲ್ಲರಿಗೂ ಸ್ಪೂರ್ತಿಯ ಸೆಲೆ

19 ckm 2a
ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಡಾ.ಕೆ.ಪಿ.ಅಂಶುಮAತ್, ಬಿ.ಎಲ್.ಪ್ರವೀಣ್ ಬೆಟ್ಟಗೆರೆ, ನೇತ್ರಾವತಿ, ತನೋಜ್ ಕುಮಾರ್, ಹಿರೇಮಗಳೂರು ರಾಮಚಂದ್ರ, ಉಪ್ಪಳ್ಳಿ ಭರತ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಬಾಹ್ಯ ಮತ್ತು ಆಂತರಿಕ ಶತೃಗಳ ವಿರುದ್ಧ ದುರ್ಗಿಯಂತೆ ಹೋರಾಡಿ ಹುತಾತ್ಮರಾದ ಮಾಜಿ ಪ್ರಧಾನಿ, ಹೆಮ್ಮೆಯ ಕಾಂಗ್ರೆಸ್ ನಾಯಕಿ ಇಂದಿರಾಗಾAಧಿ ನಮ್ಮೆಲ್ಲರಿಗೂ ಸ್ಪೂರ್ತಿಯ ಸೆಲೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಕಾಡಾ ಆಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪ್ರಚಾರ ಸಮಿತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಮಂತ್ರಿ ಇಂದಿರಾಗಾAಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಇಂದಿರಾಗಾAಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾAಧಿ ಅವರನ್ನು ಸ್ಮರಣೆ ಮಾಡುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಅವರ ಆದರ್ಶ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇಂದಿರಾಗಾAಧಿ ಅವರು ಕೈಗೊಂಡ ದಿಟ್ಟ ನಿರ್ಧಾರ ಹಾಗೂ ಹೋರಾಟಗಳಿಂದ ದೇಶದಲ್ಲಿ ಹಲವಾರು ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುನ್ನೆಡೆಸಿಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಇಂದಿರಾಗಾAಧಿ ಅಂದು ಜಾರಿಗೆ ತಂದ ೨೧ ಅಂಶಗಳ ಕಾರ್ಯಕ್ರಮಗಳು ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿವೆ. ಉಳುವವನೆ ಭೂ ಒಡೆಯ ಕಾರ್ಯಕ್ರಮ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಅಸಮಾನತೆ ಮತ್ತು ಬಡತನಗಳ ನಿರ್ಮೂಲನೆಗಾಗಿ ಇಂದಿರಾಗಾAಧಿ ಅವರು ಹಮ್ಮಿಕೊಂಡ ಕಾರ್ಯಕ್ರಮಗಳು ನಮ್ಮ ಆಡಳಿತಕ್ಕೆ ಇಂದಿಗೂ ಮಾದರಿಯಾಗಿದೆ ಎಂದರು.

ಇAದಿರಾಗಾAಧಿ ಅವರು ದೇಶದ ಉಳಿವಿಗೆ ತನ್ನ ಪ್ರಾಣವನ್ನು ತ್ಯಜಿಸಿದ್ದಾರೆ. ಸ್ವಾತಂತ್ರö್ಯ ಸಂಗ್ರಾಮಕ್ಕೆ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೇಶದ ಐಕ್ಯತೆ, ಅಖಂಡತೆಗಾಗಿ ಹೋರಾಡಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಸ್ವಾತಂತ್ರö್ಯ ಬಂದ ನಂತರ ಭಾರತ ದೇಶದಲ್ಲಿ ಇಷ್ಟೊಂದು ಕ್ರಾಂತಿಕಾರಕ ಬದಲಾವಣೆಗಳು ಕಂಡಿರುವುದು ಇಂದಿರಾಗಾAಧಿ ಪ್ರಧಾನಮಂತ್ರಿ ಆದ ಸಂದರ್ಭದಲ್ಲಿ ಮಾತ್ರ ಎಂದು ಹೇಳಿದರು.

ಇಂದಿರಾಗಾAಧಿ ಅವರು ತನ್ನ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅವುಗಳು ಇಂದು ಉಳಿದಿವೆ. ಅವುಗಳನ್ನು ನಾವುಗಳು ಜೀವನದಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಚಿಕ್ಕಮಗಳೂರು ವಿಧಾನಸಭಾ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎಲ್.ಪ್ರವೀಣ್ ಬೆಟ್ಟಗೆರೆ ಮಾತನಾಡಿ, ಜನರ ಹಿತಕ್ಕಾಗಿ ಯಾರು ದುಡಿದಿರುತ್ತಾರೋ ಅವರನ್ನು ರಾಷ್ಟç ಗುರುತು ಮಾಡುತ್ತದೆ. ಅಂಥವರನ್ನು ನೆನಪು ಮಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ರಾಷ್ಟಿçÃಯ ಮಹಿಳಾ ಏಕೀಕರಣ ದಿನವನ್ನಾಗಿ ಆಚರಿಸುತ್ತಾ ಬರುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಎಸ್‌ಸಿ ಘಟಕ ರಾಜ್ಯ ಸಂಚಾಲಕಿ ನೇತ್ರಾವತಿ ಹಾಗೂ ನಗರ ಆಶ್ರಯ ಸಮಿತಿ ಸದಸ್ಯೆ ಯಶೋಧ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮುಖಂಡ ಉಪ್ಪಳ್ಳಿ ಕೆ.ಭರತ್, ಪ್ರಮುಖರಾದ ಕೀರ್ತಿ ಶೇಟ್, ಪ್ರಕಾಶ್ ರೈ, ಶೃದೀಪ್, ರಾಘವೇಂದ್ರ, ಎಸ್.ಟಿ.ಸೋಮಶೇಖರ್, ಸಂತೋಷ್ ಲಕ್ಯಾ, ತಿಮ್ಮಯ್ಯ, ನಾಗೇಶ್, ನಾಗೇಶ್ ರಾಜ್ ಅರಸ್, ದಾವಿದ್, ಸುರೇಶ್, ಕುಸುಮಾ ಭರತ್, ತಾಹೀರ್, ಉಮೇಶ್ ಶೆಟ್ಟಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net