ಬಳ್ಳಾರಿ : ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅಧ್ಯಕ್ಷತೆಯಲ್ಲಿ ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಡಿಸಿ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕುಂದುಕೊರತೆಗಳ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.