ಇಂದು ಚಿತ್ರದುರ್ಗಕ್ಕೆ ಬಿಎಸ್‌ವೈ, ಬಿ.ಎಲ್.ಸಂತೋಷ್

CTDD 00008
Published on

ಚಿತ್ರದುರ್ಗ:ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪರ ಚುನಾವಣಾ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ‌್ಯದರ್ಶಿ ಬಿ.ಎಲ್.ಸಂತೋಷ್ ಅವರು ಏ.16 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ.
ಅಂದು ಬೆಳಗ್ಗೆ 11ಗಂಟೆಗೆ ನಗರದ ಚಳ್ಳಕೆರೆ ರಸ್ತೆ ಎಸ್‌ಜಿ ಕನ್ವೇಷನ್ ಹಾಲ್‌ನಲ್ಲಿ ಏರ್ಪಡಿಸಿರುವ ಎನ್‌ಡಿಎ ಬೆಂಬಲಿತ ವೀರಶೈವ ಲಿಂ ಗಾಯತ ಪ್ರಮುಖರ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸುವರು.
ಸಂಸದರು,ಮಾಜಿ ಸಚಿವರು,ಶಾಸಕರು,ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು ಮತ್ತಿತರರು ಸಭೆಯಲ್ಲಿ ಭಾಗವಹಿಸುವರು. ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿರುವ ಬಿ ಜೆಪಿ ಶಕ್ತಿಕೇಂದ್ರ ಪ್ರಮುಖರೊಂದಿಗೆ ಸಭೆಯನ್ನು ಬಿ.ಎಲ್.ಸಂತೋ ಷ್ ಅವರು ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net