ಇಂದು ಜಿಲ್ಲಾಮಟ್ಟದ ವ್ಯಸನಮುಕ್ತ ದಿನಾಚರಣೆ

Untitled--0008
Published on

ಚಿತ್ರದುರ್ಗ:ಜಿಲ್ಲಾಡಳಿತ, ಜಿಪಂ,ವಾರ್ತಾ,ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆ.1ರಂದು ಬೆಳಗ್ಗೆ 11ಕ್ಕೆ ಡಿಸಿ ಕಚೇರಿಯಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ಜಿಲ್ಲಾಮಟ್ಟದ ವ್ಯಸನ ಮುಕ್ತ ದಿನ ವನ್ನಾಗಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net