ಇಂದು ಪೂರ್ವಭಾವಿ ಸಭೆ

Published on

ಬಳ್ಳಾರಿ : 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯು ಬಳ್ಳಾರಿ ಜಿಲ್ಲೆಯ ತಾಲೂಕುಗಳಲ್ಲಿ ಅ. 20 ಮತ್ತು 21 ರಂದು ಸಂಚರಿಸಲಿದ್ದು, ಈ ಕುರಿತು ಅಗತ್ಯ ಸಿದ್ಧತೆಗಾಗಿ ಅ. 08 ರಂದು ಬೆಳಗ್ಗೆ 11.30 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net